ಬೀದರ್‌ಗೆ ಆಗಮಿಸಿದ ಪ್ರಧಾನಿ ಮೋದಿ: ಬಿಜೆಪಿ ನಾಯಕರಿಂದ ಸ್ವಾಗತ

0
18
ಮೋದಿ

ಬೀದರ್‌: ಬೀದರ್ ಏರ್‌ಬೇಸ್‌ಗೆ ಪ್ರಧಾನಿ ನರೇಂದ್ರ ಮೋದಿ ಇಂದು ಆಗಮಿಸಿದರು.
ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೀದರ್‌ಗೆ ಆಗಮಿಸಿದ ಮೋದಿ ಅವರನ್ನು ಹೂಗುಚ್ಛ ನೀಡಿ ಸ್ಥಳೀಯ ‌ಬಿಜೆಪಿ‌ ಮುಖಂಡರು ಸ್ವಾಗತಿಸಿದರು. ಕೇಂದ್ರ ಸಚಿವ ಭಗವಂತ್ ಖೂಬಾ, ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ, ಮಾಜಿ ಸಚಿವ ಪ್ರಭು ಚವ್ಹಾಣ್ ಜೊತೆ ಇತರರು ಮೋದಿ ಅವರನ್ನು ಸ್ವಾಗತಿಸಿದರು.
ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆ ಬೀದರ್‌ಗೆ ಆಗಮಿಸಿದ ಪ್ರಧಾನಿ ಬಳಿಕ ಹೆಲಿಕಾಪ್ಟರ್ ಮೂಲಕ ತೆಲಂಗಾಣದ ನಿಜಾಮಾಬಾದ್‌ಗೆ ತೆರಳಿದರು.

Previous articleಲಿಂಗಾಯತರಿಗೆ ಅನ್ಯಾಯವಾಗಿಲ್ಲ
Next articleಸಹೋದರಿಯರು ಆತ್ಮಹತ್ಯೆ