ಬೆಂಗಳೂರಿಗೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

0
66
ವಿಮಾನ
ಸಾಂದರ್ಭಿಕ ಚಿತ್ರ

ಬೆಂಗಳೂರ: ನಗರದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ನಿಗದಿ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು ರಾಜ್ಯದ ಅಭಿವೃದ್ಧಿ ಯೋಜನೆಗಳಿಗಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಸೇರಿದಂತೆ ಹಲವು ಸಚಿವರನ್ನು ಭೇಟಿ ಮಾಡಿ, ಮನವಿ ಮಾಡಲಾಗುವುದು. ಈಗಾಗಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಬಾಕಿ ಉಳಿದಿರುವ ಕೇಂದ್ರ ಪ್ರಾಯೋಜಕತ್ವದ ಯೋಜನೆಗಳ ಬಗ್ಗೆ ಚರ್ಚಿಸಲಾಗಿದೆ, ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಆಹ್ವಾನ ನೀಡಲು ದೆಹಲಿಗೆ ತೆರಳುತ್ತಿದ್ದು, ಈ ಸಂದರ್ಭದಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗುವುದು, 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಸ್ಥಳಗಳ ಆಯ್ಕೆ ನಡೆದಿದ್ದು, ಒಂದೆರಡು ದಿನಗಳಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

Previous articleಗಣರಾಜ್ಯೋತ್ಸವದಲ್ಲಿ ಕೃಷಿ ಸಖಿಯಾಗಿ ಹೆಬ್ರಿಯ ಸುಗಂಧಿ ನಾಯ್ಕ್‌
Next articleಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ