ಬೆಂಗಳೂರಿನಲ್ಲಿ ಅಗ್ನಿ ಅವಘಡ

0
31

ಬೆಂಗಳೂರು : ಕೋರಮಂಗಲ ಸಮೀಪ ಇರುವ ಪಬ್‌ ನಲ್ಲಿ ಸಿಲಿಂಡರ್‌ ಸ್ಟೋಟದಿಂದ ಅಗ್ನಿ ದುರಂತ ಸಂಭವಿಸಿದೆ. ಪ್ರಾಣ ಉಳಿಸಿಕೊಳ್ಳಲು ವ್ಯಕ್ತಿಯೊರ್ವ ನಾಲ್ಕನೇ ಮಹಡಿಯಿಂದ ಜಿಗಿದಿದ್ದಾನೆ ಎನ್ನಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ಆರಿಸಲು ಹರಸಾಹಸಪಟ್ಟಿದ್ದಾರೆ.
ಈ ಘಟನೆಯಲ್ಲಿ ಕಟ್ಟಡದ ನಾಲ್ಕನೇ ಮಹಡಿ ಸಂಪೂರ್ಣ ಹೊತ್ತಿ ಉರಿದಿದೆ, ಘಟನೆಯಲ್ಲಿ ಹಲವರಿಗೆ ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದ್ದು,  ಗಾಯಾಳುಗಳನ್ನು ಸದ್ಯ ಸಮೀಪದ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. 

Previous articleಸಾವಯವ ಬೆಲ್ಲ ಬಳಕೆಯಿಂದ ಆರೋಗ್ಯ ವೃದ್ಧಿ
Next articleಮೂವರು ಬೆಟ್ಟಿಂಗ್ ಕುಳಗಳ ಬಂಧನ