Home ಅಪರಾಧ ಬೆಂಗಳೂರಿನಲ್ಲಿ ಮಳೆಗೆ ಮಹಿಳೆ ಬಲಿ

ಬೆಂಗಳೂರಿನಲ್ಲಿ ಮಳೆಗೆ ಮಹಿಳೆ ಬಲಿ

0

ಮಳೆ ನೀರಿನಲ್ಲಿ ಕಾರು ಮುಳುಗಿ ಮಹಿಳೆಯೋರ್ವಳು ಮೃತಪಟ್ಟ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್‌ ಉದ್ಯೋಗಿ ಭಾನುರೇಖಾ ಎಂಬ ಮಹಿಳೆ ಮೃತಪಟ್ಟಿದ್ದಾರೆ.
ಕಾರಿನಲ್ಲಿ ಕೆಆರ್‌ ಸರ್ಕಲ್‌ ಅಂಡರ್‌ಪಾಸ್‌ ಮುಖಾಂತರ ಹಾದುಹೋಗುವಾಗ ಅಂಡರಪಾಸ್‌ ಬಳಿ ನೀರು ತುಂಬಿದೆ. ನೀರು ತುಂಬಿದ್ದರಿಂದ ಕಾರು ಅಲ್ಲೇ ಸಿಲುಕಿಕೊಂಡಿದೆ. ನಂತರ ಕಾರಿನಲ್ಲೂ ನೀರು ಒಳನುಗ್ಗಿದೆ. ಇದರಿಂದ ಹೊರಬರಲಾಗದೇ ಭಾನುರೇಖಾ ನೀರಿನಲ್ಲಿ ಮುಳುಗಿ ಅಸ್ವಸ್ಥರಾಗಿದ್ದರು. ಬಳಿಕ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಸೂಕ್ತ ಚಿಕಿತ್ಸೆ ಸಿಗದೇ ಮಹಿಳೆ ಸಾವನ್ನಪ್ಪಿದ್ದಾರೆ.

Exit mobile version