Home ತಾಜಾ ಸುದ್ದಿ RCB ವಿಜಯೋತ್ಸವದ ವೇಳೆ ಕಾಲ್ತುಳಿತ: ತಪ್ಪು ಯಾರೇ ಮಾಡಿದ್ದರೂ ಕ್ರಮ

RCB ವಿಜಯೋತ್ಸವದ ವೇಳೆ ಕಾಲ್ತುಳಿತ: ತಪ್ಪು ಯಾರೇ ಮಾಡಿದ್ದರೂ ಕ್ರಮ

0

ಬೆಂಗಳೂರು: ಆರ್‌ಸಿಬಿ ತಂಡದ ವಿಜಯೋತ್ಸವದ ಸಂದರ್ಭ ಕಾಲ್ತುಳಿತ ಹಾಗೂ 11 ಜನ ಮೃತಪಟ್ಟು 56 ಜನ ಗಾಯಗೊಂಡಿದ್ದಾರೆ ಎಂದು ಇಂದು ಗುರುವಾರ ಗೃಹ ಸಚಿವ ಡಾ ಜಿ ಪರಮೇಶ್ವರ್ ದೃಢಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಗಾಯಗೊಂಡವರಲ್ಲಿ 46 ಮಂದಿ ಚಿಕಿತ್ಸೆ ಪಡೆದು ಮನೆಗಳಿಗೆ ತೆರಳಿದ್ದಾರೆ. 10 ಮಂದಿ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ ಯಾರಿಗೂ ಗಂಭೀರ ಸ್ವರೂಪದಲ್ಲಿಲ್ಲ, ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ತಡೆಗಟ್ಟಲು ಸರ್ಕಾರ ಯಾವುದೇ ಸಭೆ ಸಮಾರಂಭಗಳನ್ನು ಮಾಡುವಾಗ, ವಿಜಯೋತ್ಸವವನ್ನು ಮಾಡುವ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಯ ಮಾರ್ಗದರ್ಶನದಲ್ಲಿ ಮಾಡಬೇಕೆಂದು ಸೂಚನೆಗಳನ್ನು ನೀಡುತ್ತೇವೆ. ಹೊಸ ಶಿಷ್ಟಾಚಾರಗಳನ್ನು ಜಾರಿಗೆ ತರಲಾಗುವುದು, ಬೆಂಗಳೂರಿನಲ್ಲಿ ನಡೆದ ಘಟನೆ ರೀತಿ ರಾಜ್ಯದ ಕ್ರಿಕೆಟ್ ಇತಿಹಾಸದಲ್ಲಿಯೇ ಆಗಿರಲಿಲ್ಲ. ಮೃತಪಟ್ಟ ಯುವಕ-ಯುವತಿಯರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ ಎಂದರು.

Exit mobile version