ಬೆಳಗಾವಿ: ಅಕ್ರಮ ಗೋವು ಸಾಗಾಟ

0
13

ಬೆಳಗಾವಿ:  ಮಹಾರಾಷ್ಟ್ರ ದಿಂದ ಹುಬ್ಬಳ್ಳಿ ಕಡೆಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿಯ ಮೇಲೆ ಭಾನುವಾರ ದಾಳಿ ನಡೆಸಿ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದ ಬಳಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿ ತಡೆದ 50 ಕ್ಕೂ ಹೆಚ್ಚು ಕಾರ್ಯಕರ್ತರು, ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹುಬ್ಬಳ್ಳಿ ಕಡೆಗೆ ಹೊರಟಿದ್ದ ಲಾರಿಯಲ್ಲಿ 10 ರಿಂದ 12 ಗೋವುಗಳನ್ನು ಸಾಗಾಟ ಮಾಡಲಾಗುತ್ತಿತ್ತು.
ಸುದ್ದಿ ತಿಳಿದ ತತ್ ಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಉದ್ರಿಕ್ತರನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous article
Next articleಭೀಕರ ಅಪಘಾತ:  ಬಾಲಕಿ ಸಜೀವ ದಹನ