ಬೆಳಗಾವಿ ಗ್ರೇಡ್-2 ತಹಶೀಲ್ದಾರ್ ಅಶೋಕ್ ಮಣ್ಣಿಕೇರಿ ನಿಧನ

0
16

ಬೆಳಗಾವಿ: ಎಸಿ ಕಚೇರಿಯಲ್ಲಿ ಗ್ರೇಡ್-2 ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಶೋಕ್ ಮಣ್ಣಿಕೇರಿ ಹೃದಯಾಘಾತದಿಂದ ನಿಧನರಾದರು ಎನ್ನಲಾಗಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಳೆದ ಬಾರಿ ಶಾಸಕಿಯಾಗಿದ್ದ ವೇಳೆ ಮೃತ ಅಶೋಕ್ ಮಣ್ಣಿಕೇರಿ ಅವರು ಆಪ್ತ ಸಹಾಯಕನಾಗಿ ಸೇವೆ ಸಲ್ಲಿಸಿದ್ದರು. ನಂತರ ಎಸಿ ಕಚೇರಿಯಲ್ಲಿ ಗ್ರೇಡ್-2 ತಹಶೀಲ್ದಾರ್ ಆಗಿ ಅವರು ಕಾರ್ಯನಿವಹಿಸುತ್ತಿದ್ದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂತಾಪ: ಅಶೋಕ ಮಣ್ಣಿಕೇರಿ ಅವರ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂತಾಪ ಸೂಚಿಸಿದ್ದಾರೆ. ‘ನನ್ನ ಆಪ್ತ ಸಹಾಯಕರಾಗಿದ್ದ ಅಶೋಕ ಮಣ್ಣಿಕೇರಿ ನಿಧನದ ಸುದ್ದಿ ಮನಸ್ಸಿಗೆ ತೀವ್ರ ನೋವನ್ನುಂಟು ಮಾಡಿದೆ. ಅಪಾರ ಜ್ಞಾನ, ಅನುಭವವುಳ್ಳ ವ್ಯಕ್ತಿ ಕಳೆದುಕೊಂಡಿರುವುದು ದೊಡ್ಡ ನಷ್ಟವೆನಿಸುತ್ತಿದೆ. ಈ ಸಮಯದಲ್ಲಿ ಅವರ ಆತ್ಮಕ್ಕೆ ಶಾಂತಿಯನ್ನು‌ ಕೋರಿ ಅವರ ಕುಟುಂಬಸ್ಥರಿಗೆ ಭಗವಂತ ನೋವು ಸಹಿಸುವ ಶಕ್ತಿ ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

Previous articleಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ರೈ ಬಂಧನ
Next articleಮದುವೆಗೆ ಹೆಣ್ಣು ಸಿಗದೆ ಆತ್ಮಹತ್ಯೆ ಮಾಡಿಕೊಂಡ ಯಲ್ಲಾಪುರದ ಯುವಕ