Home ನಮ್ಮ ಜಿಲ್ಲೆ ಚಿಕ್ಕಮಗಳೂರು ಬೆಳೆ ನಾಶ: ರೈತ ಆತ್ಮಹತ್ಯೆ

ಬೆಳೆ ನಾಶ: ರೈತ ಆತ್ಮಹತ್ಯೆ

0

ಚಿಕ್ಕಮಗಳೂರು: ಮಳೆಯಿಲ್ಲದೆ ಈರುಳ್ಳಿ ಬೆಳೆ ನಾಶಗೊಂಡ ಹಿನ್ನೆಲೆ ತನ್ನ ಹೊಲದಲ್ಲೇ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡೂರು ತಾಲೂಕಿನ ಗಿರಿಯಾಪುರ ಗ್ರಾಮದಲ್ಲಿ ನಡೆದಿದೆ.
ನೇಣಿಗೆ ಶರಣಾದ ರೈತನನ್ನು ಸತೀಶ್ ( 49) ಗುರುತಿಸಲಾಗಿದ್ದು, ಮಳೆ ನಿರೀಕ್ಷೆಯಲ್ಲಿದ್ದ ಗಿರಿಯಾಪುರ ಗ್ರಾಮದ ರೈತ ಸತೀಶ್ ಎಂಬವರು ಸಾಲ ಮಾಡಿ ತನ್ನ ಎರಡು ಎಕರೆ ಜಮೀನಿನಲ್ಲಿ ಈರುಳ್ಳಿ ಬೆಳೆ ಬಿತ್ತನೆ ಮಾಡಿದ್ದರು.
ಆದರೆ ಮಳೆ ಬಾರದ ಹಿನ್ನೆಲೆ ಉಂಟಾದ ಬರಕ್ಕೆ ಈರುಳ್ಳಿ ಬೆಳೆ ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದ ಮನನೊಂದ ರೈತ ಸತೀಶ್, ಜಮೀನಿನಲ್ಲೇ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಅಜ್ಜಂಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Exit mobile version