Home ತಾಜಾ ಸುದ್ದಿ ಬೆಳ್ಳಂಬೆಳಗ್ಗೆ ನಡುರಸ್ತೆಯಲ್ಲೇ ಹೊತ್ತಿ ಉರಿದ BMTC ಬಸ್‌

ಬೆಳ್ಳಂಬೆಳಗ್ಗೆ ನಡುರಸ್ತೆಯಲ್ಲೇ ಹೊತ್ತಿ ಉರಿದ BMTC ಬಸ್‌

0

ಬೆಂಗಳೂರು: ಬಿಎಂಟಿಸಿ ಬಸ್‌ ಒಂದು ಇಂದು ಬೆಳಗ್ಗೆ ಬೆಂಕಿಯ ಕೆನ್ನಾಲಗೆಗೆ ಸುಟ್ಟು ಭಸ್ಮವಾಗಿದೆ.
ನಗರದ ಎಂಜಿ ರೋಡ್‌ ರಸ್ತೆಯಲ್ಲಿ ರೋಸ್ ಗಾರ್ಡನ್‌ನಿಂದ ಶಿವಾಜಿನಗರದ ಕಡೆಗೆ ಹೋಗುತ್ತಿದ್ದ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಬೆಳಿಗ್ಗೆ ಅನಿಲ್ ಕುಂಬ್ಳೆ ಜಂಕ್ಷನ್ ಹತ್ತಿರ 144E/11 ರೂಟ್ ನಂಬರ್ ಬಿಎಂಟಿಸಿ ಬಸ್ ಕೋರಮಂಗಲ ಡಿಪೋಗೆ ಸೇರಿದ್ದಾಗಿದ್ದ ಬಸ್‌ನ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಎಚ್ಚೆತ್ತುಕೊಂಡ ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕರು ಪ್ರಯಾಣಿಕರನ್ನು ಕೆಳಗೆ ಇಳಿಸಿದರು. ಬಸ್ಸಿನಲ್ಲಿ ಸುಮಾರು 30 ಮಂದಿ ಪ್ರಯಾಣಿಕರಿದ್ದರು. ಚಾಲಕರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಧಾವಿಸಿ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಈ ಘಟನೆಯಿಂದಾಗಿ, ಮೇಲೆದ್ದ ಭಾರಿ ಪ್ರಮಾಣದ ಹೊಗೆ ಪಕ್ಕದಲ್ಲಿದ್ದ ಮೆಟ್ರೋ ನಿಲ್ದಾಣವನ್ನು ಸಹ ಆವರಿಸಿತ್ತು,

https://twitter.com/samyuktakarnat2/status/1810543695654949043

Exit mobile version