Home ಅಪರಾಧ ಬೆಳ್ಳಂಬೆಳಗ್ಗೆ ಹೆದ್ದಾರಿಯಲ್ಲಿ ಭೀಕರ ಅಪಘಾತ: ಬೆಳಗಾವಿಯ 3 ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಳ್ಳಂಬೆಳಗ್ಗೆ ಹೆದ್ದಾರಿಯಲ್ಲಿ ಭೀಕರ ಅಪಘಾತ: ಬೆಳಗಾವಿಯ 3 ಸಾವು, ಇಬ್ಬರಿಗೆ ಗಂಭೀರ ಗಾಯ

0

ದಾವಣಗೆರೆ: ಮಾರುತಿ ವ್ಯಾನ್ ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಾರುತಿ ವ್ಯಾನ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರಗಾಯವಾದ ಘಟನೆ ದಾವಣಗೆರೆ ತಾಲ್ಲೂಕು ಅತ್ತಿಗೆರೆ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ.

ದಾವಣಗೆರೆ ಕಡೆಯಿಂದ ಸಂತೇಬೆನ್ನೂರು ಕಡೆ ಹೋಗುತ್ತಿದ್ದ ಮಾರುತಿ ಇಕೋ ಹಾಗೂ ಸಂತೇಬೆನ್ನೂರಿನಿಂದ ದಾವಣಗೆರೆ ಕಡೆ ಬರುತ್ತಿದ್ದ ಖಾಸಗಿ ಬಸ್ ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಮೃತರು ಬೆಳಗಾವಿ ಜಿಲ್ಲೆಯ ಕಾಗವಾಡ ದವರು ಎಂಬುದಾಗಿ ತಿಳಿದುಬಂದಿದೆ.

ಮೃತ ದೇಹಗಳನ್ನು ದಾವಣಗೆರೆ ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯ ಶವಗಾರದಲ್ಲಿರಿಸಿದ್ದು, ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ಮಾಹಿತಿ ಇನ್ನೂ ತಿಳಿದುಬಂದಿಲ್ಲ.

Exit mobile version