Home ತಾಜಾ ಸುದ್ದಿ ಬೈಕ್ ಮುಖಾಮುಖಿ ಡಿಕ್ಕಿ ಸವಾರರಿಬ್ಬರ ಸಾವು

ಬೈಕ್ ಮುಖಾಮುಖಿ ಡಿಕ್ಕಿ ಸವಾರರಿಬ್ಬರ ಸಾವು

0

ಕೆಂಭಾವಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಗುರುವಾರ ನಡೆದಿದೆ.

ಪೀರಪ್ಪ ಮುದನೂರ(33), ಶರಣಪ್ಪ ಪರಸನಹಳ್ಳಿ (30) ಸಾವಿಗೀಡಾದ ದುರ್ದೈವಿಗಳಾಗಿದ್ದಾರೆ. ಘಟನೆಯಲ್ಲಿ ಬೈಕ್ ಹಿಂಬದಿ ಸವಾರ ಸಹ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಟ್ಟಣದಲ್ಲಿ ಹಾದುಹೋಗಿರುವ ಸುರಪುರ – ಹುನಗುಂದ ರಾಜ್ಯ ಹೆದ್ದಾರಿಯಲ್ಲಿ ಪರಸನಹಳ್ಳಿ ಕಡೆ ಹೋಗುತ್ತಿದ್ದ ಬೈಕ್ ಹಾಗೂ ಅದರ ಎದುರು ಬದಿಯಿಂದ ಬರುತ್ತಿದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಉಭಯ ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version