Home Advertisement
Home ತಾಜಾ ಸುದ್ದಿ ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು

0
95

ಬೆಳ್ತಂಗಡಿ : ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ವೇಳೆ ಮನೆಯ ಸಮೀಪವೇ ಕಾಡಾನೆಯೊಂದು ರಸ್ತೆ ಮಧ್ಯೆ ಎದುರಾಗಿದ್ದು ದಿನೇಶ್ ಇದನ್ನು ಗಮನಿಸಿ ಆತಂಕಗೊಂಡು ರಿಕ್ಷಾವನ್ನು ಸ್ಥಳದಲ್ಲಿಯೇ ಬಿಟ್ಟು ಓಡಿ ತಪ್ಪಿಸಿಕೊಂಡಿದ್ದಾರೆ, ಈ ವೇಳೆ ಕಾಡಾನೆಯೊಂದು ರಿಕ್ಷಾದ ಮೇಲೆ ಎರಗಿ ರಿಕ್ಷಾವನ್ನು ನಜ್ಜುಗುಜ್ಜುಗೊಳಿಸಿ ಸಮೀಪದ ಚರಂಡಿಗೆ ತಳ್ಳಿ ಹಾಕಿದೆ.. ರಿಕ್ಷಾವನ್ನು ಹುಡಿ ಮಾಡುತ್ತಿರುವ ಶಬ್ಧ ದಿನೇಶ್‌ರವರ ಪತ್ನಿ ಹಾಗೂ ನೆರೆಯವರಿಗೆ ಕೇಳಿ ಸ್ಥಳಕ್ಕೆ ಬಂದಾಗ ಕಾಡನೆಗಳು ಅರಣ್ಯದತ್ತ ಹೋಗಿದೆ ರಿಕ್ಷಾದ ಸ್ಥಿತಿ ನೋಡಿ ಕುಸಿದು ಬಿದ್ದ ದಿನೇಶ್ ಅವರನ್ನು ಮನೆಗೆ ಕರೆದುಕೊಂಡು ಹೋಗಿ ಉಪಚರಿಸಿದ್ದಾರೆ, ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಪಂಚಾಯತ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.