Home ನಮ್ಮ ಜಿಲ್ಲೆ ಬ್ರಾಹ್ಮಣ ಸಂಘಟನೆಗೆ ದಿಟ್ಟ ಕ್ರಮ

ಬ್ರಾಹ್ಮಣ ಸಂಘಟನೆಗೆ ದಿಟ್ಟ ಕ್ರಮ

0

ಬೆಳಗಾವಿ: ಬ್ರಾಹ್ಮಣ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕೆಲವೊಂದು ಮಹತ್ವದ ತೀರ್ಮಾನ ಮಾಡಲಾಗುತ್ತಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಹೇಳಿದರು.
ನಗರದಲ್ಲಿಂದು ಬ್ರಾಹ್ಮಣ ಸಂಘಟನೆ ಪದಾಧಿಕಾರಿಗಳ ಜೊತೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಸರ್ವಸಾಧಾರಣ ಸಭೆಯಲ್ಲಿ ತೀರ್ಮಾನಿಸಿದಂತೆ ಸಂಘಟನಾತ್ಮಕ ದೃಷ್ಟಿಯಿಂದ ಕೆಲವೊಂದಿಷ್ಟು ಕ್ರಮವನ್ನು ಕೈಗೊಳ್ಳಬೇಕಾಗಿದೆ ಎಂದರು.
ಈ ಹಿನ್ನೆಲೆಯಲ್ಲಿ ಎಕೆಬಿಎಂಎಸ್ ಸದಸ್ಯರನ್ನು ಹೆಚ್ಚಳ ಮಾಡುವುದು ಸೇರಿದಂತೆ ಸಂಘಟನಾತ್ಮಕ ದೃಷ್ಟಿಯಿಂದ ಕೆಲವೊಂದು ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ ಎಂದರು.
ಎಕೆಬಿಎಂಎಸ್‌ನಲ್ಲಿ ಮಹಿಳಾ ಘಟಕವನ್ನು ಇನ್ನಷ್ಟು ಗಟ್ಟಿಗೊಳಿಬೇಕಾಗಿದೆ. ಈ ನಿಟ್ಟಿನಲ್ಲಿ ಕೆಲವೂ ನಡೆಯುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಸಂಘಟನೆ ದೃಷ್ಟಿಯಿಂದ ಸಮಾವೇಶವನ್ನು ಮಾಡಲಾಗುತ್ತದೆ. ಅಷ್ಟೇ ಅಲ್ಲ ಸಮಾಜದ ನಿರುದ್ಯೋಗಿಗಳು ಈಗ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ದೊಡ್ಡ ದೊಡ್ಡ ಕಂಪನಿಗಳೊಂದಿಗೆ ಮಾತುಕತೆ ನಡೆಸಿ ಉದ್ಯೋಗ ಮೇಳವನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಮಾಡುವ ಚಿಂತನೆ ಕೂಡ ನಡೆದಿದೆ ಎಂದರು.
ಈ ಸಂದರ್ಭದಲ್ಲಿ ಎಕೆಬಿಎಂಎಸ್‌ನ ರಾಜ್ಯಕಾರ್ಯಕಾರಿಣಿ ಸದಸ್ಯ ವಿಲಾಸ ಜೋಶಿ, ನಗರಸೇವಕಿ ವಾಣಿ ಜೋಶಿ, ಮಾಜಿ ನಗರಸೇವಕಿ ಅನುಶ್ರೀ ದೇಶಪಾಂಡೆ, ಅಕ್ಷಯ ಕುಲಕರ್ಣಿ, ಅನಿಲ ಕುಲಕರ್ಣಿ, ಕೇಶವ ಕುಲಕರ್ಣಿ, ದಿನೇಶ ದೇಶಪಾಂಡೆ ಮತ್ತಿತರರಿದ್ದರು.

Exit mobile version