ಬ್ರ್ಯಾಂಡ್ ಬೆಂಗಳೂರು ನಾಟಕದ ಮತ್ತೊಂದು ಅಧ್ಯಾಯ

0
20
ಸಾಂದರ್ಭಿಕ ಚಿತ್ರ

ಬೆಂಗಳೂರು: ಅಪನಂಬಿಕೆ ಸರ್ಕಾರದಿಂದ, ನಂಬಿಕೆ ಯೋಜನೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಟೀಕಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ‘ನಂಬಿಕೆ ನಕ್ಷೆ’ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ ಅವರು ಹೇಳಿರುವುದು ಬ್ರ್ಯಾಂಡ್ ಬೆಂಗಳೂರು ನಾಟಕದ ಮತ್ತೊಂದು ಅಧ್ಯಾಯವಷ್ಟೇ ಎಂಬುದು ಬೆಂಗಳೂರಿನ ಜನತೆಯ ಬಲವಾದ ನಂಬಿಕೆ. ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಮಂತ್ರಿ ಡಿಸಿಎಂ ಅವರ ಅನೇಕ ಹೇಳಿಕೆಗಳು ಘೋಷಣೆಯಲ್ಲೇ ಉಳಿದಿರುವುದರಿಂದ ಸಾರ್ವಜನಿಕರಿಗೆ ಇವರ ಮೇಲೆ ಕಿಂಚಿತ್ತೂ ನಂಬಿಕೆಯೇ ಇಲ್ಲದಂತಾಗಿದೆ.

ಬೆಂಗಳೂರಿನ ಜನತೆಗೆ:

❌ಮೇಕೆದಾಟು ನೀರು ಸಿಗುವ ನಂಬಿಕೆ ಇಲ್ಲ
❌ರಸ್ತೆ ಗುಂಡಿ ಮುಚ್ಚುವ ಬಗ್ಗೆ ನಂಬಿಕೆ ಇಲ್ಲ
❌ಮನೆ ಬಾಗಿಲಿಗೆ ಆಡಳಿತ ಘೋಷಣೆ ಬಗ್ಗೆ ನಂಬಿಕೆ ಇಲ್ಲ
❌ಕಾನೂನು ಸುವ್ಯವಸ್ಥೆ ಬಗ್ಗೆ ನಂಬಿಕೆ ಇಲ್ಲ
❌ನುಡಿದಂತೆ ನಡೆದಿದ್ದೇವೆ ಎಂಬ ಬಗ್ಗೆ ನಂಬಿಕೆ ಇಲ್ಲ
❌ಭ್ರಷ್ಟಾಚಾರ ಮುಕ್ತ ಆಡಳಿತದ ಬಗ್ಗೆಯಂತೂ ಎಳ್ಳಷ್ಟೂ ನಂಬಿಕೆ ಇಲ್ಲ.

ಒಟ್ಟಿನಲ್ಲಿ ಈ ಅಪನಂಬಿಕೆ ಸರ್ಕಾರದಿಂದ ನಂಬಿಕೆ ಹೆಸರಿನಲ್ಲಿ ಯೋಜನೆ ಘೋಷಣೆ ಆಗಿರುವುದು ಈ ಶತಮಾನದ ಅತ್ಯಂತ ದೊಡ್ಡ ವಿರೋಧಾಭಾಸ ಎಂದರೆ ಅತಿಶಯೋಕ್ತಿ ಅಲ್ಲ ಎಂದಿದ್ದಾರೆ.

Previous articleಕಾಶಪ್ಪನವರ ಡೈಲಾಗ್‌ಗೆ ಜನ ಫಿದಾ..!
Next articleDamage controlಗಾಗಿ ಅಧಿಕಾರಿ ಅಮಾನತ್ತು