ಬೆಳಗಾವಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ ) ಜನವರಿ 5, 6, 7 ರಂದು 3ದಿನಗಳ ಕಾಲ ಮಂಗಳೂರು ಆಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಏರ್ಪಡಿಸಿರುವ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಕೆಯುಡಬ್ಲ್ಯೂಜೆ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024’ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಬಿಡುಗಡೆಗೊಳಿಸಿದರು.
ಲಾಂಛನ ಅನಾವರಣ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಮಾಜಿ ಸಚಿವ ಅಭಯಚಂದ್ರ ಜೈನ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪಂದ್ಯಾವಳಿಯ ಪ್ರಧಾನ ಸಂಚಾಲಕ ಅನ್ನು ಮಂಗಳೂರು, ಉಪಾಧ್ಯಕ್ಷ ಭಾಸ್ಕರ್ ರೈ. ಕೆ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಪದಾಧಿಕಾರಿಗಳಾದ, ರಾಜೇಶ್ ದಡ್ಡಂಗಡಿ, ರಾಜೇಶ್ ಶೆಟ್ಟಿ, ಸಂದೇಶ ಜಾರ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.