ಭಾರತಕ್ಕೆ ಸ್ವರ್ಣ: ಪ್ರಧಾನಿ ಮೋದಿ ಅಭಿನಂದನೆ

0
17

ಪುರುಷರ 10 ಮೀಟರ್‌ ಏರ್‌ ಪಿಸ್ತೂಲ್‌ ಟೀಮ್​ ಈವೆಂಟ್​ನಲ್ಲಿ ಭಾರತದ ಯಶೋಗಾಥೆ ಮುಂದುವರಿದಿದೆ. ಗುರುವಾರ ನಡೆದ ವೈಯಕ್ತಿಕ ಫೈನಲ್‌ನಲ್ಲಿ ಸರಬ್ಜೋತ್ ಸಿಂಗ್, ಅರ್ಜುನ್ ಸಿಂಗ್ ಚೀಮಾ ಮತ್ತು ಶಿವ ನರ್ವಾಲ್ ಅವರ ತಂಡವು ಚೀನಾ ತಂಡವನ್ನು ಸೋಲಿಸಿ ವಿಜೇತರಾಗಿ ಹೊರಹೊಮ್ಮಿತು. ಶೂಟಿಂಗ್​ನಲ್ಲಿ ಭಾರತಕ್ಕೆ ನಾಲ್ಕನೇ ಚಿನ್ನದ ಪದಕ ಲಭಿಸಿದೆ.


ಪ್ರಧಾನಿ ಮೋದಿ ಅಭಿನಂದನೆ: ಏಷ್ಯನ್ ಗೇಮ್ಸ್‌ನಲ್ಲಿ ನಮ್ಮ ಗಮನಾರ್ಹ 10 ಮೀಟರ್ ಏರ್ ಪಿಸ್ತೂಲ್ ಪುರುಷರ ತಂಡದಿಂದ ಶೂಟಿಂಗ್‌ನಲ್ಲಿ ಮತ್ತೊಂದು ಚಿನ್ನ ಗಳಿಸಿದೆ. ಸರಬ್ಜೋತ್ ಸಿಂಗ್, ಅರ್ಜುನ್ ಸಿಂಗ್ ಚೀಮಾ ಮತ್ತು ಶಿವ ನರ್ವಾಲ್ ಅವರು ತಮ್ಮ ಉತ್ತಮ ಪ್ರದರ್ಶನದಿಂದ ಇಡೀ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ. ನಾನು ಅವರನ್ನು ಅಭಿನಂದಿಸುತ್ತೇನೆ. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣವಾದ ಎಕ್ಸ್​ನಲ್ಲಿ ಬರೆದಿದ್ದಾರೆ.

Previous articleಹಸಿರು ಕ್ರಾಂತಿ ಪಿತಾಮಹ ಎಂಎಸ್ ಸ್ವಾಮಿನಾಥನ್ ಇನ್ನಿಲ್ಲ
Next articleಡಾ. ಎಸ್.ಎಸ್. ಸ್ವಾಮಿನಾಥನ್ ನಿಧನಕ್ಕೆ ಗಣ್ಯರ ಸಂತಾಪ