ಭಾರತೀಯ ಜನತಾ ಪಕ್ಷದ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶ

0
22
SAMVESHA

ಕಲಬುರಗಿಯಲ್ಲಿಂದು ಭಾರತೀಯ ಜನತಾ ಪಕ್ಷದ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಒಬಿಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಡಾ. ಲಕ್ಷ್ಮಣ್, ಸೇರಿದಂತೆ ರಾಜ್ಯದ ಸಚಿವರು, ಶಾಸಕರು, ನಿಗಮ ಮಂಡಳಿಗಳ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಂಡಿದ್ದಾರೆ.

ಸಮಾವೇಶ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಪರಿಶಿಷ್ಟ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿದ ಬಳಿಕ ಈ ಸಮುದಾಯ ಬಿಜೆಪಿ ಸರ್ಕಾರದ ಬದ್ಧತೆಯನ್ನು ಶ್ಲಾಘಿಸಿದೆ. OBC ಸಮುದಾಯವರೂ ಕೂಡ ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರಗಳನ್ನು ಮೆಚ್ಚಿಕೊಂಡಿದ್ದಾರೆ. ಬಿಜೆಪಿ ಪರಿಶಿಷ್ಟರು, ಹಿಂದುಳಿದ ವರ್ಗ, ಸಾಮಾಜಿಕ ನ್ಯಾಯದ ಪರವಾಗಿದೆ ಎಂದರು.

Previous articleಅಕ್ಷರ ದೇಗುಲಗಳಿನ್ನು `ಸರ್ವಾಂಗಸುಂದರ’
Next articleಮನ್‌ ಕೀ ಬಾತ್‌ನಲ್ಲಿ ಪರಿಸರ ಹಾಗೂ ಕನ್ನಡ ಪ್ರೇಮಿ ಸುರೇಶ್‌ ಕುಮಾರ ಬಗ್ಗೆ ಶ್ಲಾಘನೆ