Home ಅಪರಾಧ ಭೀಕರ ಅಪಘಾತ: ಇಬ್ಬರ ಸ್ಥಿತಿ ಚಿಂತಾಜನಕ

ಭೀಕರ ಅಪಘಾತ: ಇಬ್ಬರ ಸ್ಥಿತಿ ಚಿಂತಾಜನಕ

0

ಬೆಳಗಾವಿ(ರಡ್ಡೆರಹಟ್ಟಿ): ಸಮೀಪದ ಘಟ್ಟನಟ್ಟಿ ಕ್ರಾಸ್ ಬಳಿ ಕ್ರೂಸರ್‌-ಗೂಡ್ಸ್‌ ಲಾರಿ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಸರ್‌ನಲ್ಲಿದ್ದ 12 ಜನರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಕ್ರೂಸರ್‌ನಲ್ಲಿದ್ದವರು ಸಿಂದಗಿ ತಾಲೂಕಿನ ನಿವಾಸಿಗಳು ಎಂದು ಹೇಳಲಾಗಿದ್ದು, ಸವದತ್ತಿ ಯಲ್ಲಮ್ಮ ದೇವಿಯ ದರ್ಶನ ಪಡೆದು ಊರಿಗೆ ಮರಳುತ್ತಿರುವಾಗ
ಜಮಖಂಡಿಯಿಂದ ಅಥಣಿಗೆ ಹೋಗುವ ಮಾರ್ಗಮಧ್ಯದಲ್ಲಿ ಗೂಡ್ಸ್‌ ಲಾರಿ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Exit mobile version