Home ನಮ್ಮ ಜಿಲ್ಲೆ ಉಡುಪಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ಸಾವು

ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ಸಾವು

0

ಕಾರ್ಕಳ : ಈಚರ್ ಲಾರಿ ಮತ್ತು ಬೈಕ್ ನಡುವೆ ಅಪಘಾತ, ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ-ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಬೈಕ್‌ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದು, ಅಪಘಾತದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಸುರೇಶ್ ಆಚಾರ್ಯ (36), ಸಮೀಕ್ಷಾ (7) ಸುಶ್ಮೀತಾ (5) ಮತ್ತು ಸುಶಾಂತ್ (2) ಗುರುತಿಸಲಾಗಿದೆ. ಮೀನಾಕ್ಷಿ ಆಚಾರ್ಯ (32) ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೈಕ್ ವೇಣೂರಿನಿಂದ ಕಾರ್ಕಳ ಕಡೆಗೆ ಬರುತ್ತಿದ್ದು ಕಾರ್ಕಳ ಬಜಗೋಳಿ ಕಡೆಯಿಂದ ಬರುತ್ತಿದ್ದ ಈಚೆರ್ ಲಾರಿ ಪಾಜೆಗುಡ್ಡೆ ತಿರುವಿನಲ್ಲಿ ಓವರ್ಟೇಕ್ ಮಾಡುವ ಭರದಲ್ಲಿ ಬೈಕೆಗೆ ಡಿಕ್ಕಿ ಹೊಡೆದಿದೆ ಮೃತರನ್ನು ಬೆಳ್ತಂಗಡಿ ತಾಲೂಕಿನ ವೇಣೂರು ಗಾಂಧಿನಗರ ನಿವಾಸಿ ಸುರೇಶ ಆಚಾರ್ಯ ಮತ್ತು ಮಕ್ಕಳು ಎಂದು ಗುರುತಿಸಲಾಗಿದೆ ಮೀನಾಕ್ಷಿ ಆಚಾರ್ಯ ಅವರ ಸ್ಥಿತಿ ಗಂಭೀರವಾಗಿದೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ

Exit mobile version