Home ಅಪರಾಧ ಭೀಕರ ಅಪಘಾತ : ರೈತ ಸಾವು

ಭೀಕರ ಅಪಘಾತ : ರೈತ ಸಾವು

0

ಬೆಳಗಾವಿ : ಭೀಕರ ರಸ್ತೆ ಅಪಘಾತದಲ್ಲಿ ಕೊತ್ತಂಬರಿ ಸೊಪ್ಪು ಸಾಗಿಸುತ್ತಿದ್ದ ರೈತ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ಬೆಳಗಾವಿ ತಾಲೂಕಿನ ಸುವರ್ಣಸೌಧದ ಬಳಿ ಬಸ್ತವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಗೂಡ್ಸ ವಾಹನ ಮತ್ತು ಕೊತ್ತಂಬರಿ ಸೊಪ್ಪು ಸಾಗಿಸುತ್ತಿದ್ದ ಟ್ರಾಕ್ಟರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಸ್ತವಾಡ ಗ್ರಾಮದ ಮಲ್ಲಪ್ಪ ದೊಡ್ಡಕಲ್ಲನ್ನವರ(41) ರೈತ ಮೃತಪಟ್ಟಿದ್ದಾನೆ.

ಬೆಳಗಾವಿ ಮಾರ್ಕೆಟ್ ಗೆ ಕೊತ್ತಂಬರಿ ಸೊಪ್ಪು ಸಾಗಿಸಲು ಹೋಗುತ್ತಿದ್ದಾಗ ಹಿಂಬದಿಯಿಂದ ಗುದ್ದಿದ ಗೂಡ್ಸ ವಾಹನದ ಅಪಘಾತ ರಭಸಕ್ಕೆ ಸಂಪೂರ್ಣ ರೈತನ ಟ್ಯಾಕ್ಟರ್ ನುಜ್ಜಾಗಿದೆ. ಸ್ಥಳಕ್ಕೆ ಹಿರೇಬಾಗೇವಾಡಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Exit mobile version