Home Advertisement
Home ಅಪರಾಧ ಭೀಕರ ಅಪಘಾತ: ಸ್ಥಳದಲ್ಲೇ ಐವರ ಸಾವು

ಭೀಕರ ಅಪಘಾತ: ಸ್ಥಳದಲ್ಲೇ ಐವರ ಸಾವು

0
215

ಕಲಬುರಗಿ: ಭೀಕರವಾದ ಅಪಘಾತ ಸಂಭವಿಸಿ, ಸ್ಥಳದಲ್ಲೇ ಐವರು ಮೃತಪಟ್ಟು, ಹನ್ನೊಂದು ಜನರಿಗೆ ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೊನ್ನ ಕ್ರಾಸ ಹತ್ತಿರ ಶುಕ್ರವಾರ ತಡರಾತ್ರಿ ನಡೆದಿದೆ.

ಜಿಲ್ಲೆಯ ಜೇವರ್ಗಿ ತಾಲೂಕಿನ ಸೊನ್ನ ಕ್ರಾಸ್ ಹತ್ತಿರ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದು ಟೆಂಪೋ ಟ್ರಾವೆಲರ ಡಿಕ್ಕಿ ಹೊಡೆದ ಪರಿಣಾಮವಾಗಿ ಈ ಅವಘಡ ಸಂಭವಿಸಿದ್ದು, ಅಪಘಾತದಲ್ಲಿ ವಾಜೀದ್, ಮೆಹಬೂಬ್, ಪ್ರಿಯಾಂಕಾ, ಮೆಹಬೂಬ್ ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿದಾರೆ.

ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು,ನೆಲೋಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಬಾಗಲಕೋಟೆ ಜಿಲ್ಲೆಯವರು.

ಅಪಘಾತದಲ್ಲಿ ಮೃತಪಟ್ಟವರು ಬಾಗಲಕೋಟೆ ಜಿಲ್ಲೆಯವರು ಎಂದು ತಿಳಿದುಬಂದಿದೆ.ವಾಹನ ಸಂಖ್ಯೆ ಕೆಎ -೨೨ ಸಿ ೩೫೮೨ ಲಾರಿಗೆ ಕೆಎ ೨೮-ಎ-೭೨೨೪ ಸಂಖ್ಯೆಯ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದಿದ್ದು, ಮೃತಪಟ್ಟಿರುವ ಎಲ್ಲರೂ ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ.

ಬಾಗಲಕೋಟೆಯಿಂದ ಕಲಬುರಗಿ ನಗರದ ಖಾಜಾ ಬಂದೇ ನವಾಜ್ ದರ್ಗಾಕ್ಕೆ ಭೇಟಿ ನೀಡಲು ಬರುತ್ತಿದ್ದರು. ಒಂದೇ ಕುಟುಂಬದ ೩೧ ಜನರು ಮ್ಯಾಕ್ಸಿಕ್ಯಾಬ ಮಾಡಿಕೊಂಡು ಕಲಬುರಗಿಯ ಖಾಜಾ ಬಂದೇ ನವಾಜ್ ದರ್ಗಾಗೆ ಬರುತ್ತಿದ್ದರು.

Previous articleಬೆಳ್ಳಂಬೆಳಗ್ಗೆ ಹೆದ್ದಾರಿಯಲ್ಲಿ ಭೀಕರ ಅಪಘಾತ: ಬೆಳಗಾವಿಯ 3 ಸಾವು, ಇಬ್ಬರಿಗೆ ಗಂಭೀರ ಗಾಯ
Next articleಎಂಆರ್ ಪಿಎಲ್ ನಿಂದ ಸಿಗದ ಸವಲತ್ತು: ಪಿಲಿಚಾಮುಂಡಿ ದೈವಸ್ಥಾನಕ್ಕೆ ಕಾರ್ಮಿಕರಿಂದ ಪಾದಯಾತ್ರೆ