Home ಅಪರಾಧ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ನಾಲ್ವರ ಸಾವು

ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ನಾಲ್ವರ ಸಾವು

0

ಕಲಬುರಗಿ: ಜಿಲ್ಲೆಯ ಅಫಜಲಪುರ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ತಡರಾತ್ರಿ ಕಮಾಂಡರ್ ಜೀಪ್ ಮತ್ತು ಲಾರಿ ಮುಖಾಮುಖಿ ಢಿಕ್ಕಿ ಹೊಡೆದು ಮಗು ಸೇರಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಆಳಂದ ತಾಲ್ಲೂಕಿನ ಮಾಡ್ಯಾಳ ಗ್ರಾಮದ ಸಂತೋಷ ಹೂವಣ್ಣ ಗೌಡಗಾಂವ (40), ಶಂಕರ ದೇವಪ್ಪ ಝಳಕಿ (55), ಸಿದ್ದಮ್ಮ ಶಂಕರ ಝಳಕಿ ಮತ್ತು ಹುಚ್ಚಪ್ಪ ಮಹಾಂತೇಶ ಝಳಕಿ (5) ಮೃತಪಟ್ಟವರು. ಮಗುವಿನ ತಾಯಿ ಪೂಜಾ ಮಹಾಂತೇಶ ಅವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಅಫಜಲಪುರ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Exit mobile version