Home ನಮ್ಮ ಜಿಲ್ಲೆ ಗದಗ ಭೀಕರ ರಸ್ತೆ ಅಪಘಾತ

ಭೀಕರ ರಸ್ತೆ ಅಪಘಾತ

0
accident

ಗದಗ : ಗದಗದ ಬೆಟಗೇರಿ ಹೊರವಲಯದಲ್ಲಿ ಮಿನಿ ಬಸ್‌ ಆಟೋ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತಡರಾತ್ರಿ ಸಂಭವಿಸಿದೆ. ಇಬ್ಬರು ಮೃತರನ್ನು ಸೈಯದ್ ಅಲಿ (20), ಪ್ರದೀಪ್ (40) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಜಿಮ್ಸ್‌ಗೆ ಸ್ಥಳಾಂತರಿಸಲಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದ್ದ ಮದುವೆ ಸಮಾರಂಭವನ್ನು ಮುಗಿಸಿಕೊಂಡು ಬೆಟಗೇರಿ ಕಡೆಗೆ ಬರುತ್ತಿದ್ದ ಮಿನಿ ಬಸ್, ನರೇಗಲ್ ಕಡೆ ಹೊರಟಿದ್ದ ಎಲ್‌ಪಿಜಿ ಆಟೋ ನಡುವೆ ಈ ಅಪಘಾತ ಸಂಭವಿಸಿದೆ. ನರಸಾಪೂರ ಆಶ್ರಯ ಕಾಲೋನಿಯ ಸಯ್ಯದ್ ಅಲಿ ಹಾಗೂ ಪ್ರದೀಪ್, ಮಂಜುನಾಥ್ ನಗರದ ನಿವಾಸಿ ನಿಖಿಲ್ ಮೃತರಾಗಿದ್ದಾರೆ. ಆಟೋ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಬೆಟಗೇರಿ ಟ್ರಾಫಿಕ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Exit mobile version