Home ನಮ್ಮ ಜಿಲ್ಲೆ ಉತ್ತರ ಕನ್ನಡ ಮಂಗನ ಕಾಯಿಲೆಗೆ ಮತ್ತೋರ್ವ ಮಹಿಳೆ ಸಾವು!

ಮಂಗನ ಕಾಯಿಲೆಗೆ ಮತ್ತೋರ್ವ ಮಹಿಳೆ ಸಾವು!

0

ಸಿದ್ದಾಪುರ: ಉತ್ತರಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ(ಕೆಎಫ್‌ಡಿ) ಹೆಚ್ಚಾಗಿದ್ದು, ಕಳೆದ ೨೦ ದಿನಗಳ ಹಿಂದೆ ಜ್ವರಕ್ಕೆ ತುತ್ತಾಗಿದ್ದ ವೃದ್ಧ ಮಹಿಳೆ ಮೃತಪಟ್ಟಿದ್ದು ಜಿಲ್ಲೆಯಲ್ಲಿ ಮೃತರ ಸಂಖ್ಯೆ ೨ಕ್ಕೆ ಏರಿಕೆಯಾಗಿದೆ.
ಸಿದ್ದಾಪುರ ತಾಲೂಕಿನ ಕೂರ್ಲಕೈ ಗ್ರಾಮದ ೬೦ ವರ್ಷದ ಮಹಿಳೆ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ. ಆಕೆಗೆ ೨೦ ದಿನಗಳ ಹಿಂದೆ ಮಂಗನ ಜ್ವರ ಕಾಣಿಸಿಕೊಂಡಿದ್ದು, ತೀವ್ರ ಜ್ವರದ ಲಕ್ಷಣಗಳಿಂದ ಬಳಲುತ್ತಿದ್ದಳು. ಬಳಿಕ ಆಕೆಯನ್ನು ಸ್ಥಳೀಯ ಆಸ್ಪತ್ರೆಯಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನು ಸಿದ್ದಾಪುರ ತಾಲೂಕಿನಲ್ಲಿಯೇ ಮಂಗನ ಕಾಯಿಲೆ ತುತ್ತಾದ ಪ್ರಕರಣಗಳ ಸಂಖ್ಯೆ ೪೩ಕ್ಕೆ ಏರಿಕೆಯಾಗಿದೆ.

Exit mobile version