ಮಂಗಳೂರು ವಿಮಾನ ದುರಂತ: ಶ್ರದ್ಧಾಂಜಲಿ

0
19

ಮಂಗಳೂರು: ಮಂಗಳೂರು ವಿಮಾನ ದುರಂತ ಸಂಭವಿಸಿ ಇದೀಗ ೧೪ ವರ್ಷ ತುಂಬುತ್ತಿದೆ. ದುರಂತದಲ್ಲಿ ಮೃತಪಟ್ಟವರಲ್ಲಿ ಹಲವರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು, ಅವುಗಳನ್ನು ಕೂಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ದಫನ ಮಾಡಲಾಗಿತ್ತು. ಅದೇ ಜಾಗದಲ್ಲಿ ಸಂತ್ರಸ್ತರ ನೆನಪಿನ ಪಾರ್ಕ್ ನಿರ್ಮಿಸಲಾಗಿದೆ. ಇಂದು ಬೆಳಗ್ಗೆ ಜಿಲ್ಲಾಡಳಿತ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪುಷ್ಪಗುಚ್ಛ ಇರಿಸಿ ಶ್ರದ್ಧಾಂಜಲಿ ಸಲ್ಲಿಸಿದರು.ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ , ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್, ಸಂತ್ರಸ್ತರ ಕುಟುಂಬದ ಸದಸ್ಯರಾದ ಶೊಭಾ ಶೆಟ್ಟಿ, ಶ್ರೇಯಾ ಮೊದಲಾದವರು ಉಪಸ್ಥಿತರಿದ್ದರು.
೨೦೧೦ರ ಮೇ ೨೨ರ ಬೆಳಗ್ಗೆ ೬:೨೦ಕ್ಕೆ ದುಬೈಯಿಂದ ಆಗಮಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್  ವಿಮಾನವು ಮಂಗಳೂರು ವಿಮಾನ ನಿಲ್ದಾಣದ ಸಮೀಪದ ಕೆಂಜಾರಿನಲ್ಲಿ ಅಪಘಾತಕ್ಕೀಡಾಗಿತ್ತು. ಈ ವೇಳೆ ವಿಮಾನದಲ್ಲಿದ್ದ ಪೈಲಟ್, ಸಿಬ್ಬಂದಿ ಸಹಿತ ೧೫೮ ಮಂದಿ ಮೃತಪಟ್ಟಿದ್ದರು. ೮ ಮಂದಿ ಬದುಕಿ ಉಳಿದಿದ್ದರು.

Previous articleಶಾಸಕ ಪೂಂಜ ಬಂಧನಕ್ಕೆ ಆಗಮಿಸಿದ ಪೊಲೀಸರು: ಶಾಸಕರ ಮನೆ ಮುಂದೆ ಹೈಡ್ರಾಮ
Next articleರಾಜ್ಯದಲ್ಲೀಗ ಅನ್ಯಾಯವನ್ನು ಸಹಿಸಬೇಕು, ಪ್ರತಿಭಟಿಸುವಂತಿಲ್ಲ : ಶಾಸಕ ಕಾಮತ್ ಆಕ್ರೋಶ