Home ಅಪರಾಧ ಮಕ್ಕಳ ಕಳ್ಳನೆಂದು ಭಾವಿಸಿ ವ್ಯಕ್ತಿಗೆ ತಳಿತ

ಮಕ್ಕಳ ಕಳ್ಳನೆಂದು ಭಾವಿಸಿ ವ್ಯಕ್ತಿಗೆ ತಳಿತ

0

ಧಾರವಾಡ: ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ಮಕ್ಕಳ ಕಳ್ಳನೆಂದು ಭಾವಿಸಿ ವ್ಯಕ್ತಿಯನ್ನು ವಿದ್ಯುತ್ ಕಂಬಕ್ಕೆ ಹಗ್ಗದಿಂದ ಕಟ್ಟಿ ಹಾಕಿ ಥಳಿಸಿದ ಘಟನೆ ರವಿವಾರ ನಡೆದಿದೆ.
ವ್ಯಕ್ತಿಯೊಬ್ಬ ಗ್ರಾಮದಲ್ಲಿ ಹಿಂದಿ ಭಾಷೆಯಲ್ಲಿ ಮಾತನಾಡುತ್ತ ತಿರುಗುತ್ತಿದ್ದ ವೇಳೆ ಗ್ರಾಮಸ್ಥರು ಸೇರಿ ಆತ ಮಕ್ಕಳನ್ನು ಕಳ್ಳತನ ಮಾಡಲು ಬಂದಿದ್ದಾನೆ ಎಂದು ಅನುಮಾನಗೊಂಡು ಥಳಿಸಿದ್ದಾರೆ. ಸಂಶಯಾಸ್ಪದ ವ್ಯಕ್ತಿಯನ್ನು ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.

Exit mobile version