ಹುಬ್ಬಳ್ಳಿ: ಮಗನೇ ತಂದೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಹುಬ್ಬಳ್ಳಿ ತಾಲೂಕಿನ ಗಿರಿಯಾಲ ಗ್ರಾಮದಲ್ಲಿ ನಡೆದಿದೆ.
ಬೆಳ್ಳಂ ಬೆಳೆಗ್ಗೆ ಕೆಲಸ ಮಾಡುವ ವಿಚಾರಕ್ಕೆ ತಂದೆ ಮಗನ ನಡುವೆ ವಾದ ವಿವಾದ ನಡೆದು ಮಗನಿಗೆ ತಂದೆ ಅವಾಚ್ಯ ಶಬ್ದದಿಂದ ಬೈದಿದ್ದೇ ಕೊಲೆಗೆ ಕಾರಣ ಎನ್ನಲಾಗಿದೆ.
ಕೊಲೆಯಾದ ವ್ಯಕ್ತಿ ಉಮೇಶ ಮಹದೇವಪ್ಪ ಸುಡಕೇನವರ(58) ಎಂದು ಗುರುತಿಸಲಾಗಿದೆ. ಆರೋಪಿ ಹನಮಂತಪ್ಪ ಉಮೇಶ ಸುಡಕೇನವರ ಆಗಿದ್ದು. ಬಂಧಿಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ಕೊಟ್ಟಿದ್ದು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಇನ್ಸ್‌ಪೆಕ್ಟರ್ ಮುರಗೇಶ ಚನ್ನಣ್ಣವರ ಸಹ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.