Home ನಮ್ಮ ಜಿಲ್ಲೆ ತುಮಕೂರು ಮದರಸಾ ಶಿಕ್ಷಣ ವ್ಯವಸ್ಥೆ ಪರಿಶೀಲನೆ: ಸಚಿವ ಬಿ.ಸಿ. ನಾಗೇಶ್

ಮದರಸಾ ಶಿಕ್ಷಣ ವ್ಯವಸ್ಥೆ ಪರಿಶೀಲನೆ: ಸಚಿವ ಬಿ.ಸಿ. ನಾಗೇಶ್

0

ರಾಜ್ಯದ ಮದರಸಾಗಳಲ್ಲಿ ಕಲಿಯುವ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯುತ್ತಿಲ್ಲ. ಹೆಚ್ಚಿನ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ದೂರುಗಳು ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮದರಸಾಗಳಲ್ಲಿ ಕಲಿತು ಮುಂದಿನ ಉನ್ನತ ವ್ಯಾಸಂಗಕ್ಕೆ ಹೋಗಲು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಮುಂದಿನ ತರಗತಿಯ ಪಾಠಗಳು ಅರ್ಥವಾಗುತ್ತಿಲ್ಲ ಎಂದು ಮಕ್ಕಳೇ ಹೇಳುತ್ತಿವೆ. ಇದನ್ನು ಸರಿಪಡಿಸಲು ಶೈಕ್ಷಣಿಕ ವ್ಯವಸ್ಥೆಯನ್ನು ಪರಿಶೀಲನೆ ನಡೆಸಲಾಗುತ್ತಿದೆ. ಮತ್ತು ಎಲ್ಲ ಶಾಲೆಗಳಲ್ಲಿಯೂ ಇನ್ನು ಮುಂದೆ ಎನ್‌ಇಪಿ ಎಲ್ಲ ಶಾಲೆಗಳಲ್ಲಿಯೂ ಅನುಷ್ಠಾನವಾಗುತ್ತದೆ ಎಂದರು.

Exit mobile version