ಮಧ್ಯಂತರ ಜಾಮೀನು ಅವಧಿ ವಿಸ್ತರಿಸಲು ಕೇಜ್ರಿವಾಲ್ ಮನವಿ

0
9

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸೆರೆವಾಸ ಅನುಭವಿಸುತ್ತಿದ್ದ ತಮಗೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀಡಿರುವ ಮಧ್ಯಂತರ ಜಾಮೀನನ್ನು ವೈದ್ಯಕೀಯ ಕಾರಣಗಳಿಗಾಗಿ ಒಂದು ವಾರ ಕಾಲ ವಿಸ್ತರಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌. ಮೇ 10 ರಂದು ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1ರವರೆಗೆ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿತ್ತು. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರು ಮಧ್ಯಂತರ ಜಾಮೀನನ್ನು 7 ದಿನಗಳ ಕಾಲ ವಿಸ್ತರಿಸಬೇಕೆಂದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

Previous articleಭೀಕರ ರಸ್ತೆ ಅಪಘಾತ: ಮೂವರ ಸಾವು
Next articleಬೆಳಗಾವಿಯ ಐಸಿಎಂಆರ್ ಸಂಸ್ಥಾಪನಾ ದಿನಾಚರಣೆಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್