ಮನೆಯಲ್ಲಿ ಅಗ್ನಿ ಅವಘಡ: ಬಾರ್ ಮಾಲಕ ಸಾವು, ಪತ್ನಿ ಗಂಭೀರ

0
18

ಉಡುಪಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮನೆ ಮಾಲಿಕ ಮೃತಪಟ್ಟು ಪತ್ನಿ ಗಂಭೀರ ಗಾಯಗೊಂಡ ಘಟನೆ ಅಂಬಲಪಾಡಿ ಗಾಂಧಿ ನಗರದಲ್ಲಿ ಸೋಮವಾರ ಬೆಳಗಿನ ಜಾವ ಸಂಭವಿಸಿದೆ.
ಮೃತಪಟ್ಟವರನ್ನು ಅಂಬಲಪಾಡಿ ಶೆಟ್ಟಿ ಲಂಚ್ ಹೋಮ್ ಬಾರ್ ಉದ್ಯಮಿ ರಮಾನಂದ ಶೆಟ್ಟಿ ಎಂದು ಗುರುತಿಸಲಾಗಿದೆ. ಮನೆಯಲ್ಲಿ ರಮಾನಂದ ಶೆಟ್ಟಿ, ಪತ್ನಿ ಹಾಗೂ ಈರ್ವರು ಮಕ್ಕಳ ಸಹಿತ ನಾಲ್ವರು ಮಲಗಿದ್ದ ವೇಳೆ ಬೆಂಕಿ ಅವಘಡ ಉಂಟಾಗಿದೆ.
ಬೆಂಕಿಯ ಹೊಗೆಯಿಂದ ರಮಾನಂದ ಶೆಟ್ಟಿ ದಂಪತಿ ಪ್ರಜ್ಞೆ ತಪ್ಪಿ ತೀವ್ರ ಅಸ್ವಸ್ಥಗೊಂಡಿದ್ದರು ಎನ್ನಲಾಗಿದೆ. ಘಟನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ತಂಡ ಕೂಡಲೇ ಕಾರ್ಯಾಚರಣೆ ನಡೆಸಿ ನಾಲ್ವರನ್ನೂ ರಕ್ಷಿಸಿದ್ದು, ಅವರಲ್ಲಿ ಪ್ರಜ್ಞೆ ತಪ್ಪಿ ಅಸ್ವಸ್ಥಗೊಂಡಿದ್ದ ದಂಪತಿಯನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ರಮಾನಂದ ಶೆಟ್ಟಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದ್ದು, ಅವಘಡದಿಂದ ಅಪಾರ ಸೊತ್ತುಗಳು ಸುಟ್ಟು ಕರಕಲಾಗಿದೆ ಎಂದು ಅಗ್ನಿಶಾಮಕ ದಳ ಅಧಿಕಾರಿಗಳು ತಿಳಿಸಿದ್ದಾರೆ.

Previous articleಮುಡಾ ಅಕ್ರಮ:  ನಿವೃತ್ತ ನ್ಯಾಯಾಧೀಶರ ಏಕ ಸದಸ್ಯ ಆಯೋಗ ರಚನೆ
Next articleಪಿಜಿಸಿಇಟಿ-2024: ಪರಿಷ್ಕೃತ ವೇಳಾಪಟ್ಟಿ ಪ್ರಕಟ