Home ನಮ್ಮ ಜಿಲ್ಲೆ ಧಾರವಾಡ ಮಹದಾಯಿ ಬಗ್ಗೆ ಮಾತನಾಡಲು ಕಾಂಗ್ರೆಸ್‌ಗೆ ಹಕ್ಕಿಲ್ಲ: ಸಿಎಂ.ಬೊಮ್ಮಾಯಿ

ಮಹದಾಯಿ ಬಗ್ಗೆ ಮಾತನಾಡಲು ಕಾಂಗ್ರೆಸ್‌ಗೆ ಹಕ್ಕಿಲ್ಲ: ಸಿಎಂ.ಬೊಮ್ಮಾಯಿ

0
BASAVARAJ BOMAI

ಹುಬ್ಬಳ್ಳಿ: ಮಹದಾಯಿ ಬಗ್ಗೆ ಮಾತನಾಡಲು ಕಾಂಗ್ರೆಸ್ ಗೆ ಹಕ್ಕಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾ ಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಹದಾಯಿ ಕುರಿತು ಕಾಂಗ್ರೆಸ್ ಸಮಾವೇಶ ಮಾಡುವ ಬಗ್ಗೆ ಸುದ್ದಿಗಾರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ರಕ್ತದಲ್ಲಿ ನಾನು ಪತ್ರ ಬರೆದಿದ್ದಕ್ಕೇ ಕಾಮಗಾರಿ ಪ್ರಾರಂಭವಾಗಿದ್ದು. ನಾನು ನೀರಾವರಿ ಸಚಿವನಿದ್ದ ಸಂದರ್ಭದಲ್ಲಿ ಕಾಲುವೆಯನ್ನು 5.5 ಮೀಟರ್ ಗಳಷ್ಟು ನಿರ್ಮಾಣವಾಯಿತು. ಕಾಂಗ್ರೆಸ್ ಏನು ಮಾಡಿದರು. ಸೋನಿಯಾ ಗಾಂಧಿ ಗೋವಾದಲ್ಲಿ ಒಂದು ಹನಿ ನೀರನ್ನು ತಿರುಗಿಸಲು ಬಿಡುವುದಿಲ್ಲ ಎಂದಿದ್ದರು. ಅವರ ಕಾಲದಲ್ಲಿ ನಾವು ನಿರ್ಮಿಸಿದ್ದ ಕಾಲುವೆಗೆ ಗೋಡೆ ಕಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ಮಹದಾಯಿ ನೀರನ್ನು ಕರ್ನಾಟಕಕ್ಕೆ ತರುವ ಕಾಲುವೆಗೆ ಗೋಡೆ ಕಟ್ಟಿರುವುದೇ ದೊಡ್ಡ ಸಾಧನೆ ಎಂದರು.

Exit mobile version