ಹುಬ್ಬಳ್ಳಿ: ಮಹದಾಯಿ ಯೋಜನೆ ಹಿನ್ನಡೆಗೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ಆರೋಪಿಸಿದರು.
ಈ ಕುರಿತು ಹುಬ್ಬಳ್ಳಿಯ ಅವರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನ್ಯಾಯಾಧೀಕರಣಕ್ಕೆ ಹೋಗುವ ಅವಶ್ಯಕತೆ ಇರಲಿಲ್ಲ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವಧಿಯಲ್ಲಿ ನ್ಯಾಯಾಧೀಕರಣ ಮಾಡಿದ್ದು, ಕಾಂಗ್ರೆಸ್ ಸರಕಾರ. ಇದರಿಂದಾಗಿ ಯೋಜನೆಗೆ ಎಂಟತ್ತು ವರ್ಷ ತಡವಾಯಿತು. ಮಹಾದಾಯಿ ವಿಚಾರದಲ್ಲಿ ದೊಡ್ಡ ಅಪರಾಧ ಮಾಡಿದ್ದು ಕಾಂಗ್ರೆಸ್ ಎಂದು ವಾಗ್ದಾಳಿ ನಡೆಸಿದರು.