ಮಹಾಮಾಯ ರಥೋತ್ಸವ ಸಂಪನ್ನ

0
24

ಮಂಗಳೂರು: ನಗರದ ರಥಬೀದಿಯಲ್ಲಿರುವ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ಬ್ರಹ್ಮರಥೋತ್ಸವ ಮಂಗಳವಾರ ಸಹಸ್ರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು. ಬೆಳಿಗ್ಗೆ ಮಹಾಪ್ರಾರ್ಥನೆ ಬಳಿಕ ಶ್ರೀ ದೇವರಿಗೆ ಶತ ಕಲಶಾಭಿಷೇಕ, ಗಂಗಾಭಿಷೇಕ, ಪುಳಕಾಭಿಷೇಕ, ಕನಕಾಭಿಷೇಕಗಳು ನಡೆದವು. ಯಜ್ಞ ಮಂಟಪದಲ್ಲಿ ಮಹಾ ಪೂರ್ಣಾಹುತಿ ನೆರವೇರಿತು ಸಾಯಂಕಾಲ ಬೆಳ್ಳಿ ಪಲ್ಲಕಿಯಲ್ಲಿ ಶ್ರೀ ದೇವರು ವಿರಾಜಮಾನರಾಗಿ ರಥಾರೋಹಣ ನೆರೆದ ಭಜಕರಿಗೆ ಸೇವಾ ಪ್ರಸಾದ ವಿತರಣೆ ಬಳಿಕ ರಥ ಎಳೆದು ವಿಜೃಂಭಣೆಯಿಂದ ನೆರವೇರಿತು. ಶ್ರೀ ದೇವಳದ ಆಡಳಿತ ಮೊಕ್ತೇಸರರಾದ ಸಿ.ಎ. ಶ್ರೀನಿವಾಸ್ ಕಾಮತ್, ಮಾರೂರ್ ಸುಧೀರ್ ಪೈ, ಪ್ರಕಾಶ್ ಕಾಮತ್, ಅನಂತ್ ಭಟ್, ಗಣೇಶ್ ಭಟ್, ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉಪಸ್ಥಿತರಿದ್ದರು.

Previous articleಶಾಸಕರ ವಿರುದ್ಧ ಸುಳ್ಳು ಪ್ರಕರಣ ದಾಖಲು
Next articleಶಾಸಕ ಕಾಮತ್ ವಿರುದ್ಧ ಎಫ್‌ಐಆರ್: ಬಿಜೆಪಿ ಪ್ರತಿಭಟನೆ