ಮಹಾ ಮೈತ್ರಿಕೂಟಕ್ಕೆ ‘INDIA’ ಎಂದು ನಾಮಕರಣ

0
18

ಬೆಂಗಳೂರು: ಪ್ರತಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ INDIA ಎಂದು ಹೆಸರಿಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. I-ಇಂಡಿಯನ್​ N-ನ್ಯಾಷನಲ್ D-ಡೆಮಾಕ್ರಟಿಕ್​​ I-ಇನ್​ಕ್ಲೂಸಿವ್​​​​ A-ಅಲೈನ್ಸ್ (Indian National Developmental Inclusive Alliance) ಎಂಬುದಾಗಿದೆ. 11 ಜನರ ಸಮಿತಿ ರಚನೆ ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದೇವೆ. ಈ 11 ಜನರ ಹೆಸರು ಸದ್ಯದಲ್ಲೇ ಘೋಷಣೆ ಮಾಡುತ್ತೇವೆ. ಮಹಾರಾಷ್ಟ್ರ, ಮುಂಬೈನಲ್ಲಿ ಮತ್ತೆ ಸಭೆ ಸೇರಲಿದ್ದೇವೆ. ಕ್ಯಾಂಪೇನ್ ಮ್ಯಾನೇಜ್ಮೆಂಟ್​​ಗೆ ಕಾರ್ಯದರ್ಶಿ ನೇಮಕ ಮಾಡಲಾಗುವುದು. ದೆಹಲಿಯಲ್ಲಿ ಈ ಬಗ್ಗೆ ನಾವು ನಿರ್ಧಾರ ಕೈಗೊಳ್ಳಲಿದ್ದೇವೆ. ಮುಂಬೈನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಖರ್ಗೆ ತಿಳಿಸಿದರು. ಬೆಂಗಳೂರಿನಲ್ಲಿ ನಡೆದ ಮಹಾಘಟಬಂಧನ್ ಸಭೆಯ ಬಳಿಕ ಖರ್ಗೆ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ನಾಯಕರು ಈ ನಿರ್ಧಾರ ಘೋಷಿಸಿದರು.

Previous articleಬರಪೀಡಿತ ಪ್ರದೇಶ ಎಂದು ಘೋಷಿಸಿ
Next articleಸ್ಥಾಯಿ ಸಮಿತಿ‌ ಅಧ್ಯಕ್ಷರ ಅಧಿಕಾರ ಸ್ವೀಕಾರ