Home Advertisement
Home ತಾಜಾ ಸುದ್ದಿ ಮಹಿಳೆಯರಿಗೆ ಅಪಮಾನ ಮಾಡಿಲ್ಲ: ಎಚ್‌ಡಿಕೆ ಸ್ಪಷ್ಟನೆ

ಮಹಿಳೆಯರಿಗೆ ಅಪಮಾನ ಮಾಡಿಲ್ಲ: ಎಚ್‌ಡಿಕೆ ಸ್ಪಷ್ಟನೆ

0
108
kumarswami

ಬೆಂಗಳೂರು: ಮಹಿಳೆಯರಿಗೆ ಮುಗ್ಧತೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಗ್ಯಾರಂಟಿಗಳ ಬಗ್ಗೆ ಎಚ್ಚರದಿಂದಿರಿ ಎಂದು ಹೇಳಿದ್ದೇನೆ ಹೊರತು ಮಹಿಳೆಯರಿಗೆ ಅಪಮಾನ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಗ್ಯಾರಂಟಿ ಯೋಜನೆ ಹೆಸರಿನಲ್ಲಿ ನಿಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ. ನಾನು ಮಹಿಳೆಯರನ್ನು ಅಪಮಾನ ಮಾಡಿಲ್ಲ. ಮುಗ್ಧ ಜನರನ್ನು, ಮಹಿಳೆಯರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದಿದ್ದೇನೆ. ಕಷ್ಟ ಎಂದು ಬಂದಾಗ ನಾನು ಆಶ್ರಯ ನೀಡಿದ್ದೇನೆ. ನಾನು ಸಿಎಂ ಆಗಿದ್ದಾಗ ಮಹಿಳೆಯರಿಗಾಗಿ ಸಾಕಷ್ಟು ಯೋಜನೆ ತಂದಿದ್ದೇನೆ. ಮಹಿಳೆಯರ‌ ಕೂಗಿಗೆ ಸ್ಪಂದಿಸಿ ರಾಜ್ಯದಲ್ಲಿ ಸರಾಯಿ‌ ನಿಷೇಧಿಸಿದ್ದೇನೆ. ಮಹಿಳೆಯರ ಬಗ್ಗೆ ನಾನು ಕೇವಲವಾಗಿ ಮಾತನಾಡುವುದಿಲ್ಲ. ಅಸಡ್ಡೆಯಿಂದ ಕಂಡಿಲ್ಲ, ಅಪಮಾನ ಆಗುವ ರೀತಿ ಎಲ್ಲೂ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.