Home ತಾಜಾ ಸುದ್ದಿ ಕಾಂಗ್ರೆಸ್ ಮಾಜಿ ಶಾಸಕ ವಾಸು ನಿಧನ

ಕಾಂಗ್ರೆಸ್ ಮಾಜಿ ಶಾಸಕ ವಾಸು ನಿಧನ

0

ಮೈಸೂರು: ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ನಾಯಕ ವಾಸು ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೈಸೂರು ನಗರದ ಚಾಮರಾಜ ಕ್ಷೇತ್ರದಲ್ಲಿ 2014ರಲ್ಲಿ ಶಾಸಕರಾಗಿದ್ದ ವಾಸು 2019ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ರಾಜಕೀಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. ವಾಸು ಅವರು ಮೈಸೂರು ಜಿಲ್ಲಾ ಕೈಗಾರಿಕ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಸಹಕಾರ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದರು. ‘ವಿದ್ಯಾ ವಿಕಾಸ್’ ಎಂಬ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದಾರೆ.

Exit mobile version