ಕೊಪ್ಪಳ: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ವಿರುದ್ಧ ಶುಕ್ರವಾರ ಪ್ರಕರಣ ದಾಖಲಾಗಿದೆ.
ತಾವರಗೇರಾ ಪಟ್ಟಣದ ಹುಲಿಯಾಪುರ ಗ್ರಾಮದ ವಿಶ್ವನಾಥ ದೇವಸ್ಥಾನದಲ್ಲಿ ಚುನಾವಣಾಧಿಕಾರಿಗಳ ಪರವಾನಿಗೆ ಪಡೆಯದೇ ಮಾಜಿ ಶಾಸಕ ಹಾಗೂ ಬಿಜೆಪಿ ಸಂಭಾವ್ಯ ಅಭ್ಯರ್ಥಿ ದೊಡ್ಡನಗೌಡ ಪಾಟೀಲ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಹೀಗಾಗಿ ಧಾರ್ಮಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡ ಹಿನ್ನೆಲೆಯಲ್ಲಿ ಕುಷ್ಟಗಿಯ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಸೂಗಪ್ಪ ಹನುಮಂತಪ್ಪ ದೂರನ್ನು ಆಧರಿಸಿ, ಪ್ರಕರಣ ದಾಖಲಿಸಲಾಗಿದೆ.