Home ತಾಜಾ ಸುದ್ದಿ ಮಾತನಾಡದಂತೆ ಹೈಕಮಾಂಡ್ ನಿರ್ದೇಶನ ನೀಡಿದೆ

ಮಾತನಾಡದಂತೆ ಹೈಕಮಾಂಡ್ ನಿರ್ದೇಶನ ನೀಡಿದೆ

0

ಮುಂದೆಯೂ ಸಹ ನಾವೇ ಅಧಿಕಾರದಲ್ಲಿ

ಹುಬ್ಬಳ್ಳಿ: ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಬಗ್ಗೆ ನಮಗೆ ಯಾರಿಗೂ ಮಾತನಾಡದಂತೆ ಹೈಕಮಾಂಡ್ ನಿರ್ದೇಶನ ನೀಡಲಾಗಿದೆ. ಕೇವಲ ಹೈಕಮಾಂಡ್ ಮಾತ್ರ ಈ ಕುರಿತು ನಿರ್ಧಾರ ಕೈಗೊಳ್ಳಲಿದೆ ಎಂದು ಶಾಸಕ ಎನ್.ಹೆಚ್.ಕೊನರೆಡ್ಡಿ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ವಿವಿಧ ನಾಯಕರು, ಪಕ್ಷವನ್ನು ಬಲಪಡಿಸಲು ದೆಹಲಿ ಭೇಟಿ ಸೇರಿದಂತೆ ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅದನ್ನು ಸಿಎಂ ಅಥವಾ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಪ್ರಯತ್ನ ಎಂದು ಬಿಂಬಿಸುವುದು ಸರಿಯಲ್ಲ ಎಂದರು.

ಸಿದ್ದರಾಮಯ್ಯ ಮತ್ತು ಡಿಕೆಶಿವಕುಮಾರ್ ಉತ್ತಮವಾಗಿ ಕೆಲಸ ಮಾಡುತ್ತಾ ಇದ್ದು, ನಮ್ಮ ಸರ್ಕಾರ ಸುಭದ್ರವಾಗಿದ್ದು, ಮುಂದೆಯೂ ಸಹ ನಾವೇ ಅಧಿಕಾರದಲ್ಲಿ ಇರಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಹದಾಯಿ ಕಾಮಗಾರಿಗೆ ಕೇಂದ್ರ ವನ್ಯಜೀವಿ ಮಂಡಳಿ ಇನ್ನೆರಡು ತಿಂಗಳಲ್ಲಿ ಅನುಮತಿ ನೀಡುವ ನಿರೀಕ್ಷೆ ಇದ್ದು, ಈ ವರ್ಷದಲ್ಲಿಯೇ ಕಾಮಗಾರಿ ಆರಂಭಿಸುವ ಗುರಿ ಹೊಂದಲಾಗಿದೆ. ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಮನವಿ ಮಾಡಲಾಗಿದೆ. ಅನುಮತಿ ನೀಡದೇ ಹೋದಲ್ಲಿ ನರೇಂದ್ರ- ಗೋವಾ ವಿದ್ಯುತ್ ಲೈನ್ ಮಾಡಲು ಪುನರ್ ಪರಿಶೀಲನೆ ಮಾಡಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಮತ್ತು ಡಿಕೆಶಿವಕುಮಾರ್ ಈಗಾಗಲೇ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ ಎಂದು ಹೇಳಿದರು.

Exit mobile version