ಮೈಸೂರು: ಭಾನುವಾರ ತಡರಾತ್ರಿ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕಾರ್ತಿಕ್ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ.
ತಾಲ್ಲೂಕಿನ ವರುಣಾ ಗ್ರಾಮದ ಬಳಿಯ ಹೋಟೆಲ್ ಮುಂಭಾಗದಲ್ಲಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ,ಮೃತ ಕಾರ್ತಿಕ್ ಮೈಸೂರು ನಗರದ ಕ್ಯಾತಮಾರನಹಳ್ಳಿ ನಿವಾಸಿಯಾಗಿದ್ದು. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆಯಾಗಿದೆ ಎನ್ನಲಾಗಿದ್ದು, ಮೃತದೇಹವನ್ನು ಕೆ.ಆರ್ ಆಸ್ಪತ್ರೆಯ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ. ವರುಣಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

























