Home ತಾಜಾ ಸುದ್ದಿ ಮಾರ್ಚ್ 28ರಂದು ಹುಬ್ಬಳ್ಳಿ ಜಗ್ಗಲಗಿ ಹಬ್ಬ

ಮಾರ್ಚ್ 28ರಂದು ಹುಬ್ಬಳ್ಳಿ ಜಗ್ಗಲಗಿ ಹಬ್ಬ

0

ಬೆಂಗಳೂರು: ಇದೇ ಮಾರ್ಚ್ 28ರಂದು “ಹುಬ್ಬಳ್ಳಿ ಜಗ್ಗಲಗಿ ಹಬ್ಬ -2024” ನಡೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಗಂಡು ಮಟ್ಟಿದ ನಾಡಿನಲ್ಲಿ ಗಂಡು ಮಕ್ಕಳ ಹಬ್ಬ “ಹುಬ್ಬಳ್ಳಿ ಜಗ್ಗಲಗಿ ಹಬ್ಬ -2024” ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಮಾಡಿರುವ ಅವರು ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಹುಬ್ಬಳ್ಳಿಯ ಮೂರುಸಾವಿರ ಮಠದ ಮೈದಾನದಿಂದ ಆರಂಭವಾಗುವ ಜಗ್ಗಲಗಿ ಹಬ್ಬದಲ್ಲಿ ನಾವೆಲ್ಲರೂ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ. ಶಾಸಕ ಮಹೇಶ್ ಟೆಂಗಿನಕಾಯಿ ಅವರ ಸಾರಥ್ಯದಲ್ಲಿ ಕಳೆದ ಅನೇಕ ವರ್ಷಗಳಿಂದ ಹುಬ್ಬಳ್ಳಿ ಜಗ್ಗಲಗಿ ಹಬ್ಬ ಆಯೋಜಿಸುತ್ತಾ ಬಂದಿದ್ದು, ಹುಬ್ಬಳ್ಳಿಯ ವ್ಯಾಪ್ತಿಯಲ್ಲಿ ನಡೆಯುವ ಅತೀ ದೊಡ್ಡ ಹಬ್ಬಗಳಲ್ಲಿ ಇದೂ ಒಂದು. ಇದೇ ಮಾರ್ಚ್ 28ರಂದು ಹುಬ್ಬಳ್ಳಿಯ ಮೂರುಸಾವಿರ ಮಠದ ಮೈದಾನದಿಂದ ಆರಂಭವಾಗುವ ಜಗ್ಗಲಗಿ ಹಬ್ಬದಲ್ಲಿ ನಾವೆಲ್ಲರೂ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದಿದ್ದಾರೆ.

Exit mobile version