Home ಅಪರಾಧ ಮಿಕ್ಸಿ ಬ್ಲಾಸ್ಟ್‌ ಪ್ರಕರಣ: ಎಫ್‌ ಎಸ್‌ ಎಲ್‌ ತಂಡದಿಂದ ಪರಿಶೀಲನೆ

ಮಿಕ್ಸಿ ಬ್ಲಾಸ್ಟ್‌ ಪ್ರಕರಣ: ಎಫ್‌ ಎಸ್‌ ಎಲ್‌ ತಂಡದಿಂದ ಪರಿಶೀಲನೆ

0

ಹಾಸನ: ಹಾಸನ ನಗರದ ಕೆ.ಆರ್.ಪುರಂ ಬಡಾವಣೆಯ ಸಬ್ ರಿಜಿಸ್ಟರ್ ಕಛೇರಿ ರಸ್ತೆಯಲ್ಲಿರುವ ಡಿಟಿಡಿಸಿ ಕೊರಿಯರ್ ಶಾಪ್‌ಗೆ ಎರಡು ದಿನಗಳ ಹಿಂದೆ ಮಿಕ್ಸಿ ಪಾರ್ಸಲ್ ಬಂದಿತ್ತು. ಇದೀಗ ಮಿಕ್ಸಿ ಬ್ಲಾಸ್ಟ್ ಆಗಿದ್ದು, ಕೊರಿಯರ್ ಮಾಲೀಕ ಶಶಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊರಿಯರ್‌ ಶಾಪ್‌ನಲ್ಲಿ ನಡೆದಿದ್ದ ಮಿಕ್ಸಿ ಸ್ಫೋಟ ಪ್ರಕರಣ ಸಂಬಂಧ ನಾನಾ ಆಯಾಮಗಳಲ್ಲಿ ವಿಚಾರಣೆ ನಡೆಸುತ್ತಿರುವ ಪೊಲೀಸರು ಮಹಿಳೆ ಸೇರಿ ಇಬ್ಬರನ್ನು ವಿಚಾರಣೆಗೆ ಒಳಪಡಿಸಿದ್ದಾರೆ, ಈ ಮಧ್ಯೆ ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಸ್ಫೋಟ ಸಂಭವಿಸಿದ ಅಂಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮಿಕ್ಸಿ ಬ್ಲಾಸ್ಟ್ ಕುರಿತಂತೆ ತನಿಖೆ ಮುಂದುವರಿದಿದೆ. ವದಂತಿ ನಂಬ ಬೇಡಿ ಎಂದು ಎಸ್ಪಿ ಹರಿ ರಾಮ್ ಶಂಕರ್ ಮನವಿ ಮಾಡಿದ್ದಾರೆ

ಮಿಕ್ಸಿ ಬ್ಲಾಸ್ಟ್‌ ಪ್ರಕರಣ: ಎಫ್‌ ಎಸ್‌ ಎಲ್‌ ತಂಡದಿಂದ ಪರಿಶೀಲನೆ

Exit mobile version