ಮೀಸಲಾತಿ ಹೋರಾಟಕ್ಕೆ ಸಂಪೂರ್ಣ ಬೆಂಬಲ

0
27

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿಗಾಗಿ ಒತ್ತಾಯಿಸಿ ಅಹರ್ನಿಶಿ ಹೋರಾಟ ನಡೆಸುತ್ತಿರುವ ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಪರಮಪೂಜ್ಯ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳವರನ್ನು ಇಂದು ಬೆಳಗಾವಿಯಲ್ಲಿ ಭೇಟಿಯಾಗಿ ಅವರ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಥಮ ಹೆಜ್ಜೆ ಇಟ್ಟಿದ್ದೇ ಯಡಿಯೂರಪ್ಪ ಅವರು, ಅವರ ನೇತೃತ್ವದ ಕರ್ನಾಟಕ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ 3 ಬಿ ಪ್ರವರ್ಗಕ್ಕೆ ಪಂಚಮಸಾಲಿ ಸಮುದಾಯವನ್ನು ಸೇರ್ಪಡೆ ಮಾಡುವ ಮೂಲಕ ಸಮುದಾಯಕ್ಕೆ ಮೀಸಲಾತಿ ದೊರಕಿಸಿಕೊಡಲಾಯಿತು, ಆ ಮೂಲಕ ಸಮುದಾಯದ ಪ್ರತಿಭಾವಂತರು ಸಾಮಾಜಿಕ, ಶೈಕ್ಷಣಿಕ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ಅವಕಾಶ ಪಡೆಯಲು ಉತ್ತೇಜನ ನೀಡಲಾಯಿತು. ಈ ನಿಟ್ಟಿನಲ್ಲಿ ಸೂಕ್ತ ನ್ಯಾಯ ಪಡೆಯಬೇಕೆಂಬ ಸಂಕಲ್ಪತೊಟ್ಟು ಪ್ರವರ್ಗ 2A ಸೇರ್ಪಡೆಗಾಗಿ ನಡೆಯುತ್ತಿರುವ ಹೋರಾಟ ಸ್ವಾಗತಾರ್ಹವಾಗಿದೆ. ಪೂಜ್ಯ ಶ್ರೀಗಳ ಹಾಗೂ ಸಮುದಾಯದ ಹೋರಾಟಕ್ಕೆ ಅಂದಿಗೂ, ಇಂದಿಗೂ, ಎಂದೆಂದಿಗೂ ಸಮುದಾಯದೊಂದಿಗೆ ನಾವಿರುವುದು ಕರ್ತವ್ಯ ಎಂಬ ಅಭಯದೊಂದಿಗೆ ಹೋರಾಟಕ್ಕೆ ಸಂಪೂರ್ಣ ಬೆಂಬಲ ಘೋಷಿಸಿದರು.

Previous articleಆರ್​ಬಿಐ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ
Next articleಅಮಿತ್ ಶಾ ಭೇಟಿಯಾದ ನಿಖಿಲ್‌