ಮುಂಬೈ ರೈಲು ನಿಲ್ದಾಣದಲ್ಲಿ ಬೆಂಕಿ

0
10

ಮುಂಬೈ : ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ ನಿಲ್ದಾಣದ ಕ್ಯಾಂಟೀನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಮಧ್ಯಾಹ್ನ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ ರೈಲ್ವೇ ನಿಲ್ದಾಣ ಆವರಣದಲ್ಲಿರುವ ಉಪಾಹಾರ ಗೃಹದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. LTT ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 1 ರಲ್ಲಿ ಜನ್ ಆಹಾರ್ ಕ್ಯಾಂಟೀನ್‌ನಲ್ಲಿ ಮಧ್ಯಾಹ್ನ 2.45 ಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ಕೇಂದ್ರ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಇಲ್ಲಿಯವರೆಗೆ, ಯಾರಿಗೂ ಗಾಯದ ವರದಿಯಾಗಿಲ್ಲ,” ಬೆಂಕಿಯು ನಿಲ್ದಾಣದ ಬುಕಿಂಗ್ ಮತ್ತು ವೇಟಿಂಗ್ ಹಾಲ್‌ಗಳನ್ನು ಸಹ ಆವರಿಸಿದೆ ಎನ್ನಲಾಗಿದೆ.

Previous articleವಾರದೊಳಗೆ ಸಿಎಂ ಮತ್ತೊಂದು ಸಭೆ ಕರೆಯಲಿದ್ದಾರೆ
Next articleಕೀಟನಾಶಕ ಸೇವಿಸಿ ಪ್ರೇಮಿಗಳ ಆತ್ಮಹತ್ಯೆ..!