ಚಿತ್ರದುರ್ಗ: ಸಿಎಂ ಕುರ್ಚಿಗಾಗಿ ಎರಡು ಗುಂಪುಗಳು ಬಡಿದಾಡುತ್ತಿವೆ. ಜಾತಿವಾರು ಸಿಎಂ ಆಗಬೇಕೆಂಬುವುದು ಸರಿಯಲ್ಲ ಎಂದು ಸಂಸದ ಗೋವಿಂದ ಕಾರಜೋಳ ಸೂಚ್ಯವಾಗಿ ಹೇಳಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಕುರ್ಚಿಗಾಗಿ ಜಾತಿವಾರು ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ನಮ್ಮ ಜಾತಿಯವರು ಸಿಎಂ ಆಗಬೇಕೆಂದು ಸ್ವಾಮೀಜಿಗಳೇ ಬಹಿರಂಗ ಹೇಳಿಕೆ ನೀಡುತ್ತಿರುವುದು ಸರಿಯಾದ ಕ್ರಮವಲ್ಲ. ಅರ್ಹತೆ ಮತ್ತು ದಕ್ಷತೆ ಇದ್ದ ವ್ಯಕ್ತಿ ಸಿಎಂ ಆಗುವುದು ಅಗತ್ಯವಾಗಿದೆ. ಸಿಎಂ ಕುರ್ಚಿ ಕಿತ್ತಾಟದಿಂದಾಗಿ ರಾಜ್ಯದಲ್ಲಿ ಆಡಳಿತ ಕುಸಿದಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.
ಸರ್ಕಾರ ಸತ್ತ ಪ್ರಾಣಿಯಾಗಿದ್ದು ಅದನ್ನು ಹರಿದು ತಿನ್ನುವ ರಣಹದ್ದುಗಳಾಗಿ ಶಾಸಕರು, ಮಂತ್ರಿಗಳು ಕಚ್ಚಾಡುತ್ತಿದ್ದಾರೆ. ಸರ್ಕಾರ ಎಚ್ಚೆತ್ತುಕೊಂಡು ಜನಪರ ಆಡಳಿತ ನೀಡಬೇಕೆಂದು ಒತ್ತಾಯಿಸಿದ್ದಾರೆ.