Home Advertisement
Home ತಾಜಾ ಸುದ್ದಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಬಹುತೇಕ ಪಕ್ಕಾ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಬಹುತೇಕ ಪಕ್ಕಾ

0
106

ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಬಹುತೇಕ ಪಕ್ಕಾ ಆಗಿದೆ. ಕಾಂಗ್ರೆಸ್ ಹೈಕಮಾಂಡ್​​​ನಿಂದ ಅಧಿಕೃತ ಘೋಷಣೆ ಬಾಕಿ ಇದ್ದು ರಾಹುಲ್ ಗಾಂಧಿ ಭೇಟಿ ಬಳಿಕ ಅಧಿಕೃತ ಘೋಷಣೆ ಸಾಧ್ಯತೆ. ರಾಹುಲ್ ಗಾಂಧಿಯವರು ಸಿದ್ದರಾಮಯ್ಯ, ಡಿಕೆಶಿ ಜತೆ ಮಾತುಕತೆ ನಡೆಸಿ ಚರ್ಚೆ ಬಳಿಕ ಘೋಷಣೆ ಸಾಧ್ಯತೆ. ನಾಳೆಯೇ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಅದಕ್ಕೆ ಬೇಕಾದ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗುತ್ತಿದ್ದು ಘೋಷಣೆಯೊಂದೇ ಬಾಕಿ ಇದೆ. ಶುಕ್ರವಾರ ಅಮವಾಸ್ಯೆ ಇರುವುದರಿಂದ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಇದರಿಂದಾಗಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭಾರೀ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಿದ್ದರಾಮಯ್ಯ ಮನೆ ಮುಂದೆ ಬರುವ ಸಾಧ್ಯತೆ ಇರುವುದರಿಂದ, ಸಂಭ್ರಮಿಸಲು ಸೇರುವ ಸಾಧ್ಯತೆ ಇರುವುದರಿಂದ ಖಾಕಿ ಭದ್ರತೆ ಹೆಚ್ಚಿಸಲಾಗಿದೆ.

Previous articleಡಿಕೆಶಿ ಬಳಿಕ ಸಿದ್ದು ಜತೆ ಖರ್ಗೆ ಮಹತ್ವದ ಸಭೆ
Next articleಉಚಿತ ವಿದ್ಯುತ್ ನಿರೀಕ್ಷೆ ಕರೆಂಟ್ ಶಾಕ್ ಪರೀಕ್ಷೆ