Home ನಮ್ಮ ಜಿಲ್ಲೆ ಚಿತ್ರದುರ್ಗ ಮುರುಘಾ ಮಠ: ಆಡಳಿತಾಧಿಕಾರಿಯಾಗಿ ಜಿಲ್ಲಾ ನ್ಯಾಯಾಧೀಶರ ನೇಮಕ

ಮುರುಘಾ ಮಠ: ಆಡಳಿತಾಧಿಕಾರಿಯಾಗಿ ಜಿಲ್ಲಾ ನ್ಯಾಯಾಧೀಶರ ನೇಮಕ

0

ಚಿತ್ರದುರ್ಗ: ಮುರುಘರಾಜೇಂದ್ರ ಮಠ ಮತ್ತು ಅದರ ಶಿಕ್ಷಣ ಸಂಸ್ಥೆಗಳ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ನೇಮಕ ಮಾಡಿ ಕರ್ನಾಟಕ ಹೈಕೋರ್ಟ್ ನಿನ್ನೆ ಆದೇಶ ಹೊರಡಿಸಿತ್ತು. ಮುರುಘಾ ಮಠಕ್ಕೆ ತಾತ್ಕಾಲಿಕ ಆಡಳಿತಾಧಿಕಾರಿ ನೇಮಿಸಿ ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ, ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಪ್ರೇಮಾವತಿ ಮನಗೂಳಿ ಅವರು ಮಠದ ಕರ್ತೃ ಗದ್ದಿಗೆ ಗೆ ಬೇಟಿ ನೀಡಿ ಬಳಿಕ ಹೈಕೋರ್ಟ್ ಆದೇಶದಂತೆ ಅಧಿಕಾರ ಸ್ವೀಕರಿಸಿದ್ದಾರೆ. ಪ್ರೇಮಾವತಿ ಮನುಗೂಳಿ ಅವರಿಗೆ ಮಾಜಿ ಆಡಳಿತಾಧಿಕಾರಿ ಪಿಎಸ್ ವಸ್ತ್ರದ ಅವರಿಂದ ಅಧಿಕಾರ ಹಸ್ತಾಂತರ ಮಾಡಿದರು. ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ನೇಮಕವಾಗಿದ್ದಾರೆ.

Exit mobile version