Home ನಮ್ಮ ಜಿಲ್ಲೆ ಚಿತ್ರದುರ್ಗ ಮುರುಘಾ ಶ್ರೀಗೆ ಜಾಮೀನು: ದುರ್ಗಕ್ಕಿಲ್ಲ ಎಂಟ್ರಿ

ಮುರುಘಾ ಶ್ರೀಗೆ ಜಾಮೀನು: ದುರ್ಗಕ್ಕಿಲ್ಲ ಎಂಟ್ರಿ

0

ಚಿತ್ರದುರ್ಗದ: ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಮಠದ ಮುರುಘಾ ಶ್ರೀ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿದ್ದು, ಇದೀಗ ನ್ಯಾಯಾಲಯ ಮುರುಘಾ ಶ್ರೀಗೆ ಜಾಮೀನು ನೀಡಿದೆ.
2022ರ ಸೆಪ್ಟೆಂಬರ್ 1ರಿಂದ ಜೈಲುವಾಸ ಅನುಭವಿಸುತ್ತಿರುವ ಮುರುಘಾ ಶ್ರೀಯ ಜಾಮೀನು ಅರ್ಜಿಯನ್ನು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿತ್ತು. ನಂತರ ಜಾಮೀನಿಗಾಗಿ ಮುರುಘಾ ಶ್ರೀ ಪರ ವಕೀಲರು ಹೈಕೋರ್ಟ್​ ಮೆಟ್ಟಲೇರಿದ್ದರು. ಒಂದು ಪ್ರಕರಣದಲ್ಲಿ ಮಾತ್ರ ಮುರುಘಾ ಶ್ರೀಗೆ ಜಾಮೀನು ಸಿಕ್ಕಿದ್ದು, ಜಾಮೀನ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿರುವ ಕೋರ್ಟ್​, 7 ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ. ಚಿತ್ರದುರ್ಗ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂದು ಹೇಳುವ ಮೂಲಕ ಚಿತ್ರದುರ್ಗ ಹೋಗದಂತೆ ಷರತ್ತು ವಿಧಿಸಿದೆ. ಮೊದಲು ದಾಖಲಾಗಿದ್ದ ಒಂದು ಪ್ರಕರಣದಲ್ಲಿ ಜಾಮೀನು ಲಭ್ಯವಾಗಿದ್ದು, ಪೋಕ್ಸೋ ಕಾಯ್ದೆ ಅಡಿ ದಾಖಲಾಗಿರುವ ಪ್ರಕರಣದಲ್ಲಿ ಅವರು ಜೈಲಿನಲ್ಲಿ ಉಳಿದುಕೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಬಿಡುಗಡೆ ಭಾಗ್ಯ ಇಲ್ಲದಂತಾಗಿದೆ.

Exit mobile version