ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಬಿಡುಗಡೆ

0
14

ನವದೆಹಲಿ: ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಅನ್ನು ಗುರುವಾರ ಭಾರತ್ ಬಯೋಟೆಕ್‌ ಸಂಸ್ಥೆ ಬಿಡುಗಡೆ ಮಾಡಿದೆ. ಭಾರತದಲ್ಲೇ ತಯಾರಿಸಲಾದ ಭಾರತ್ ಬಯೋಟೆಕ್‌ನ ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ( iNCOVACC) ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಬಿಡುಗಡೆ ಮಾಡಿದರು. ಲಸಿಕೆ ತಯಾರಕ ಭಾರತ್ ಬಯೋಟೆಕ್ ಪ್ರಕಾರ, CoWin ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಇಂಟ್ರಾನಾಸಲ್ ಲಸಿಕೆ ಡೋಸ್‌ಗೆ ಅಪಾಯಿಂಟ್‌ಮೆಂಟ್ ಕಾಯ್ದಿರಿಸಬಹುದು. ಭಾರತದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಈ ಲಸಿಕೆ ಪ್ರತಿ ಡೋಸ್‌ಗೆ 325 ರೂಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಇದರ ದರ 800 ರೂ ಆಗಿದೆ.

Previous articleಕಾಂಗ್ರೆಸ್‌ನವರ ಹೇಳಿಕೆಗೆ ನಾನು ಉತ್ತರ ಕೊಡಲ್ಲ
Next articleಖಾದಿಗೆ ಉತ್ತಮ ಭವಿಷ್ಯವಿದೆ: ಸಿಎಂ ಬಸವರಾಜ ಬೊಮ್ಮಾಯಿ‌