ಬಂಟ್ವಾಳ: ಇಲ್ಲಿನ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಚಾಲಕನಿಗೆ ಹಠಾತ್ ಮೂರ್ಛೆ ರೋಗ(ಪಿಡ್ಸ್) ಕಾಣಿಸಿಕೊಂಡ ಹಿನ್ನಲೆಯಲ್ಲಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಬಡಕಬೈಲು ಸೈಂಟ್ ಡೊಮಿನಿಕ್ ಆಂಗ್ಲ ಮಾಧ್ಯಮ ಶಾಲೆಯ ಬಸ್ ಚಾಲಕ, ಅಡ್ಡೂರು ನಿವಾಸಿ ಸುರೇಶ್ ಎಂಬವರಿಗೆ ಮೂರ್ಛೆ ರೋಗ ಬಾಧಿಸಿದ ಪರಿಣಾಮ ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ತೆರಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಯಾವುದೇ ಅಪಾಯವಿಲ್ಲದೆ ಚಾಲಕ ಸಹಿತ ವಿದ್ಯಾರ್ಥಿಗಳು ಪಾರಾಗಿದ್ದಾರೆ.