ಮೆಟ್ರೋ ಹಳಿಗೆ ಹಾರಿದ ಯುವಕ: ಸಂಚಾರ ವ್ಯತ್ಯಯ

0
23

ಬೆಂಗಳೂರು: ನಮ್ಮ ಮೆಟ್ರೋ ಹಳಿಗೆ ಯುವಕನೊಬ್ಬ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಅತ್ತಿಗುಪ್ಪೆ ಮೆಟ್ರೊ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಹಾರಿದ ಪರಿಣಾಮ, ಈ ಮಾರ್ಗದ ಮೆಟ್ರೊ ಸಂಚಾರದಲ್ಲಿ ಕೆಲಕಾಲ ವ್ಯತ್ಯಯ ಉಂಟಾಗಿದೆ. ಕೂಡಲೇ ಸಿಬ್ಬಂದಿ ಮೆಟ್ರೋದಿಂದ ಎಲ್ಲ ಪ್ರಯಾಣಿಕರನ್ನು ಇಳಿಸಿದ್ದಾರೆ. ಸದ್ಯ ಅತ್ತಿಗುಪ್ಪೆ ನಿಲ್ದಾಣದಲ್ಲಿ ರೈಲು ಓಡಾಟ ಸ್ಥಗಿತವಾಗಿದ್ದು, ಮಾಗಡಿ ರೋಡ್‌ನಿಂದ ವೈಟ್ ಫೀಲ್ಡ್‌ವರೆಗೆ ಮಾತ್ರ ಮೆಟ್ರೋ ಸಂಚಾರ ಇದೆ. ಮಾಗಡಿ ರಸ್ತೆಯಿಂದ ಚಲ್ಲಘಟ್ಟದವರೆಗೆ ಯಾವುದೇ ಸೇವೆ ಇಲ್ಲ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವಿಜಯನಗರ ಪೊಲೀಸರು ಹಾಗೂ ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Previous articleನೀತಿ ಸಂಹಿತೆ ಉಲ್ಲಂಘನೆ: ಸಿ.ಟಿ ರವಿ ವಿರುದ್ಧ ಪ್ರಕರಣ ದಾಖಲು
Next articleಮಹಾರಾಷ್ಟ್ರದಲ್ಲಿ ಭೂಕಂಪ: ಬೀದರ್ ಜಿಲ್ಲೆಯಲ್ಲಿ `ಎಫೆಕ್ಟ್’